ಮಂಡ್ಯ: ‘ಜಿಲ್ಲೆಯಲ್ಲಿ 40 ಗ್ರಾಮ ಪಂಚಾಯಿತಿಗಳನ್ನು ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿಗಳಾಗಿ ಗುರುತಿಸಲಾಗಿದೆ. ಸಕಾಲದಲ್ಲಿ ಚಿಕಿತ್ಸೆ ಪಡೆದರೆ ಕ್ಷಯರೋಗ ಗುಣಪಡಿಸಬಹುದು ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ, ವಿಶ್ವ ಕ್ಷಯರೋಗ ದಿನ, 100 ದಿನಗಳ ಟಿ.ಬಿ. ಮುಕ್ತ ಭಾರತ ಅಭಿಯಾನದ ಜಾಥಾಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿದರು.

‘ಕ್ಷಯರೋಗ ತಡೆಗಟ್ಟಲು ಸಾರ್ವಜನಿಕರಿಗೆ ಜಾಗೃತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ನಡೆಸಿ. ಮಾರ್ಚ್ 24ರಂದು ಪ್ರತಿ ವರ್ಷ ಕ್ಷಯ ರೋಗ ದಿನವನ್ನು ಆಚರಿಸುತ್ತಿದ್ದು, ಟಿ.ಬಿ. ರೋಗ (ಕ್ಷಯರೋಗ) ಗುಣಪಡಿಸಬಹುದು ಎಂದು ತಿಳಿಸಿದರು.

ಇಂದಿನಿಂದ 100 ದಿನಗಳ ಕಾಲ ಕ್ಷಯರೋಗ ಮುಕ್ತ ಭಾರತ ಅಭಿಯಾನವನ್ನು ಮಾಡಲಾಗುತ್ತಿದ್ದು ಸಾರ್ವಜನಿಕರು ಕಾರ್ಯಕ್ರಮದವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ‘ಕ್ಷಯ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಕ್ಷಯರೋಗ ಅಭಿಯಾನಕ್ಕೆ ಮೂರು ಉದ್ದೇಶಗಳಿದ್ದು ಎಲ್ಲ ಕ್ಷಯರೋಗ ಪ್ರಕರಣಗಳನ್ನು ಪತ್ತೆ ಹಚ್ಚುವುದು, ಕ್ಷಯರೋಗಿಗಳ ಮರಣ ಪ್ರಮಾಣ ಕಡಿಮೆಗೊಳಿಸುವುದು ಹಾಗೂ ಹೊಸ ಕ್ಷಯರೋಗ ಪ್ರಕರಣಗಳನ್ನು ತಡೆಯುವುದು ಎಂದು ತಿಳಿಸಿದರು.

ದಳವಾಯಿ ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಕಳೆದ ಮೂರು ವರ್ಷಗಳಿಂದ ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿಯಾಗಿದ್ದು, ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದರು.

ಡಿಎಚ್ಒ ಡಾ.ಕೆ ಮೋಹನ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ, ಜಿಲ್ಲಾ ಕಾರ್ಯಕ್ರಮ ಅಭಿವೃದ್ಧಿ ಅಧಿಕಾರಿ ಡಾ.ಕಾಂತರಾಜು, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಶಿಕ್ಷಣಾಧಿಕಾರಿ ವೇಣುಗೋಪಾಲ್ ಮುಂತಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-40-1153349259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.