ಮಂಡ್ಯ: ಶ್ರೀವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಥಮ ಬಾರಿಗೆ ನಗರದಲ್ಲಿ ‘ಅಭಿನವ ಸರಿಗಮಪ-2026’ ಶೀರ್ಷಿಕೆಯಡಿ ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ ರಿಯಾಲಿಟಿ ಷೋ ಆಯೋಜಿಸಲಾಗಿದೆ. ಇದರ ಆಡಿಷನ್ ಕಾರ್ಯವು ಮೇ 10ರಂದು ನಡೆಯಲಿದೆ.

ಅಭಿನವ ಭಾರತಿ ವಿದ್ಯಾ ಕೇಂದ್ರದ ಪ್ರೌಢಶಾಲಾ ಆವರಣದಲ್ಲಿ ಅಂದು ಬೆಳಿಗ್ಗೆ 9.30ಕ್ಕೆ ಆಡಿಷನ್ ಆರಂಭಗೊಳ್ಳಲಿದೆ. ಜಿಲ್ಲೆಯ ಪ್ರತಿಭಾನ್ವಿತ ಯುವ ಗಾಯಕರು ಹಾಗೂ ಗಾಯನಾಸಕ್ತರು ಈ ಆಡಿಷನ್ನಲ್ಲಿ ಭಾಗವಹಿಸಬಹುದು ಎಂದು ಟ್ರಸ್ಟ್ ಅಧ್ಯಕ್ಷ ಶಿವಮೂರ್ತಿ ಕೀಲಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೈನಲ್ನಲ್ಲಿ ವಿಜೇತರಾದ ಗಾಯಕ ಪ್ರತಿಭೆಗಳಿಗೆ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿಯೊಂದಿಗೆ ‘ಅಭಿನವ ಸರಿಗಮಪ-2026’ ಕಪ್ ನೀಡಲಾಗುತ್ತದೆ. ಆಸಕ್ತರು ಕರ್ಯಕ್ರಮದ ಸಹ ಸಂಯೋಜಕ ಯು.ಎಸ್.ಗೌತಮ್ (9980583277) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-1141092574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.