ನಾಗಮಂಗಲ: ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ.24ರಿಂದ ಆರಂಭವಾಗಿದ್ದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಕ್ಷೇತ್ರದ ಸಂಪ್ರದಾಯದಂತೆ ಅವಭೃತ ಸ್ನಾನದೊಂದಿಗೆ ಬುಧವಾರ ಸಂಪನ್ನಗೊಂಡಿತು.

ನಿರ್ಮಲಾನಂದನಾಥ ಸ್ವಾಮೀಜಿಯವರು ಬುಧವಾರ ಶ್ರೀಕ್ಷೇತ್ರದ ದೇವಾಲಯಗಳಲ್ಲಿ ಹೋಮ, ಪೂಜಾ ಕೈಂಕರ್ಯ, ಧರ್ಮ ಧ್ವಜಾರೋಹಣ ಹಾಗೂ ಮಹಾಭಿಷೇಕ ನೆರವೇರಿಸಿ ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು.

ಕ್ಷೇತ್ರದ ಧಾರ್ಮಿಕ ಹಿನ್ನೆಲೆಯುಳ್ಳ ಬಿಂದು ಸರೋವರದಲ್ಲಿ ಅವಭೃತ ಸ್ನಾನ (ಯಜ್ಞ, ಯಾಗದ ನಂತರದ ಪರಿಶುದ್ಧತೆಗಾಗಿ ಮಾಡುವ ಸ್ನಾನ) ಹಾಗೂ ಮಹಾಭಿಷೇಕ ನೆರವೇರಿದ ಬಳಿಕ ವಿಧ್ಯುಕ್ತವಾಗಿ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು.

ಜಾತ್ರೆಗೆ ಬಂದಿದ್ದ ಶ್ರೀಮಠದ ಭಕ್ತರು ಅವಭೃತ ಸ್ನಾನದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ಅನ್ನದಾಸೋಹ ನಡೆಸಿದ ವಿವಿಧ ಭಕ್ತರನ್ನು ಮಠದ ಸಂಪ್ರದಾಯದಂತೆ ಸನ್ಮಾನಿಸಲಾಯಿತು.

ಜಾತ್ರೆಗೆ ಬಂದೋಬಸ್ತ್ ಒದಗಿಸಿದ ಬೆಳ್ಳೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ಸಿಬ್ಬಂದಿಯನ್ನು ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಸೇವೆ ಸಲ್ಲಿಸಿದ ವಿವಿಧ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು, ಮುಖ್ಯಸ್ಥರಿಗೆ ಅಭಿನಂದನೆ ತಿಳಿಸಿದರು.

ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.