ಶ್ರೀರಂಗಪಟ್ಟಣ: ‘ಚಿತ್ರನಟ ಹಾಗೂ ಮಾಜಿ ಕೇಂದ್ರ ಸಚಿವ ಅಂಬರೀಶ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನಿಡಬೇಕು’ ಎಂದು ಅಂಬರೀಶ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಎಸ್.ಎಲ್. ಲಿಂಗರಾಜು ಆಗ್ರಹಿಸಿದರು.

ಪಟ್ಟಣದ ಕುವೆಂಪು ವೃತ್ತದಲ್ಲಿ ಶುಕ್ರವಾರ ಏರ್ಪಡಿಸಿದ್ದ ಚಿತ್ರ ನಟ ದಿವಂಗತ ಅಂಬರೀಶ್ ಅವರ 74ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ.

‘ಅಂಬರೀಶ್ ಅವರು ಕನ್ನಡ ಚಿತ್ರ ರಂಗಕ್ಕೆ ಸಾಕಷ್ಟು ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು’ ಎಂದು ಒತ್ತಾಯಿಸಿದರು.

ಅಂಬರೀಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ಗೆ ಕ್ಷೀರಾಭಿಷೇಕ ಮಾಡಿದರು. ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಸಾಲು ಸಾಲು ಪಟಾಕಿ ಸಿಡಿಸಿದರು. ಅಂಬರೀಶ್ ಪರ ಘೋಷಣೆ ಕೂಗಿದರು. ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎಂ. ಶ್ರೀಧರ್ ಅವರಿಗೆ ‘ಕಲಿಯುಗ ಕರ್ಣ ಅಂಬರೀಶ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಅಂಬರೀಶ್ ಅಭಿಮಾನಿಗಳ ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಟಿ.ಎಂ. ಹೊಸೂರು ಮಹೇಶ್, ಪದಾಧಿಕಾರಿಗಳಾದ ಸುನಿಲ್, ಮಹದೇವಸ್ವಾಮಿ, ನಾಗರಾಜು, ಸಿ.ಟಿ. ತಮ್ಮಣ್ಣ, ಪುರಸಭೆ ಮಾಜಿ ಸದಸ್ಯರಾದ ಎಸ್, ರಘು, ಈ. ಕುಮಾರ್, ನೀಲನಕೊಪ್ಪಲು ಚನ್ನಪ್ಪ, ಜಿ.ಸಿ. ಬಾಬು, ಎನ್. ನಂಜೇಗೌಡ, ಭರತ್, ದೇವರಾಜು, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗು, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಚಂದಗಾಲು ಶಂಕರ್, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ. ಶಂಕರಬಾಬು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-285460097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.