ಪಾಂಡವಪುರ: ಭಾವಚಿತ್ರದ ವಿವಾದದಿಂದಾಗಿ ಏ.14ರಂದು ರದ್ದಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಏ.27ರಂದು ನಡೆಸಲು ತಾಲ್ಲೂಕು ಆಡಳಿತ ತೀರ್ಮಾನಿಸಿತು.

ಪಟ್ಟಣದ ತಾಲ್ಲೂಕು ಆಡಳಿತ ಸೌಧದದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ‘ಏ.27ರಂದು ತಾಲ್ಲೂಕು ಆಡಳಿತ ಸೌಧದಲ್ಲಿ ಬೆಳಿಗ್ಗೆ 11ಕ್ಕೆ ಜಯಂತ್ಯುತ್ಸವ ನಡೆಸಲಿದ್ದು, ಅಂದು ಕಾರ್ಯಕ್ರಮಕ್ಕೆ ದಲಿತ ಸಮುದಾಯದವರು ಭಾಗವಹಿಸುವ ಜೊತೆಗೆ ಜನಪರ ಕಾಳಜಿಯುಳ್ಳವರೆಲ್ಲಾ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಮಹನೀಯರ ಜಯಂತಿಯಲ್ಲಿ ಆಯಾ ಮಹನೀಯರ ಭಾವ ಚಿತ್ರವನ್ನು ಮಾತ್ರ ಇಡಬೇಕು. ಅಂತೆಯೇ ಅಂಬೇಡ್ಕರ್ ಭಾವಚಿತ್ರವನ್ನು ಮಾತ್ರ ಇಟ್ಟು ಅಂಬೇಡ್ಕರ್ ಜಯಂತಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಕೋಮಲ, ಪೊಲೀಸ್ ಇನ್ಸ್ಪೆಕ್ಟರ್ ಶರತ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಹಾಗೂ ದಲಿತ ಮುಖಂಡರು ಭಾಗವಹಿಸಿದ್ದರು.

ಕಳೆದ ಏ.14ರಂದು ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ವೇದಿಕೆಯಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನ್ರಾಂ ಭಾವಚಿತ್ರವನ್ನು ಇಡಲಾಗಿತ್ತು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಬಲಗೈ ಸಮುದಾಯದ ಮುಖಂಡರು ಕಾರ್ಯಕ್ರಮವನ್ನು ಬಹಿಷ್ಕರಿಸಿ, ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ರದ್ದಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-40-1461708840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.