ಮದ್ದೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಮಾನ್ಯ ನಾಯಕರಾಗಿದ್ದು, ಅವರು ರಚಿಸಿದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಎನಿಸಿದೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.

ತಾಲ್ಲೂಕಿನ ಮಾಲಗಾರನಹಳ್ಳಿಯಲ್ಲಿ ಭಾನುವಾರ ರಾತ್ರಿ ಜೈ ಭೀಮ್ ಗೆಳೆಯರ ಬಳಗದ ವತಿಯಿಂದ ನಡೆದ ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪಠ್ಯ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾನತೆಗಾಗಿ ಹೋರಾಡಿದ ಅವರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ, ಬಾಬಾ ಸಾಹೇಬರ ಭಾವಚಿತ್ರವನ್ನು ಮೆರವಣಿಗೆ ಮಾಡುವ ಬದಲು ಅವರ ಬರವಣಿಗೆಯನ್ನು ಅರ್ಥೈಸಿಕೊಂಡರೆ ಬಾಬಾ ಸಾಹೇಬರನ್ನು ಜೀವಂತವಾಗಿಟ್ಟಂತೆ ಎಂದರು.

ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಅವರು ಮುಂದಿನ ದಿನಗಳಲ್ಲಿ ಉನ್ನತ ವಿದ್ಯಾಭ್ಯಾಸ ಮುಗಿಸಿ ಎತ್ತರದ ಸ್ಥಾನ ಪಡೆಯಬೇಕೆಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾದ ಡಾ.ಎಸ್ ತುಕಾರಾಮ್ ಮಾತನಾಡಿ, ಪುಟ್ಟ ಪುಟ್ಟ ಹಳ್ಳಿಗಳಲ್ಲೂ ಇಂತಹ ಕಾರ್ಯಕ್ರಮಗಳು ಜರುಗಿದಾಗ ಅಂಬೇಡ್ಕರ್ ಅವರನ್ನು ನಾವು ಜೀವಂತವಾಗಿಡಲು ಸಾಧ್ಯವಾಗುತ್ತದೆ, ಬಾಬಾ ಸಾಹೇಬರು ಒಂದು ವಿಶ್ವಕೋಶವಿದ್ದಂತೆ. ಅವರ ಬಗ್ಗೆ ಐದು ಹತ್ತು ನಿಮಿಷಗಳಲ್ಲಿ ಮಾತನಾಡುವುದು ಅಸಾಧ್ಯ ಎಂದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ, ಜೈ ಭೀಮ್ ಗೆಳೆಯರ ಬಳಗದ ಅಧ್ಯಕ್ಷ ಕಿರಣ್ ಕುಮಾರ್, ಮುಖಂಡರಾದ ಪ್ರಸನ್ನ ಕುಮಾರ್, ರಾಜೇಶ್, ವ್ಯಾಪಸಂದ್ರ ಶಂಕರಲಿಂಗೇಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-40-1549191976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.