ಮಂಡ್ಯ: ‘ಅಲ್ಪಸಂಖ್ಯಾತ ಸಮುದಾಯದ 6 ವರ್ಷದೊಳಗಿನ ಎಲ್ಲ ಮಕ್ಕಳು ಅಂಗನವಾಡಿ ಪ್ರವೇಶ ಪಡೆಯುತ್ತಾರೆ. ಆದರೆ, ಸೇರಿದ ನಂತರ ಕೆಲವು ತಿಂಗಳ ನಂತರ ಹೊರಗುಳಿಯುತ್ತಾರೆ. ಇದಕ್ಕೆ ಕಾರಣವೇನು ಎಂಬುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಪತ್ತೆ ಹಚ್ಚಬೇಕು’ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪ್ರಧಾನಮಂತ್ರಿಯ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 64 ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿವೆ. ಒಟ್ಟು 4,326 ಮಕ್ಕಳು ಹಾಜರಾಗುತ್ತಿದ್ದಾರೆ. ಅಧಿಕಾರಿಗಳು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣಕುಮಾರ್ ಮಾತನಾಡಿ, ‘ಜಿಲ್ಲೆಯ 16,218 ಜನರಿಗೆ ಕೃಷಿ, ಶಿಕ್ಷಣ, ವಾಣಿಜ್ಯ, ಮನೆ ಸೇರಿ ಇತರೆ ಕ್ಷೇತ್ರಗಳಿಗೆ ಒಟ್ಟು ₹394 ಕೋಟಿ ಸಾಲ ನೀಡಲಾಗಿದೆ. ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ 477 ಅಲ್ಪಸಂಖ್ಯಾತರಿಗೆ ಸಾಲ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ಉದ್ಯೋಗ ವಿನಿಮಯ ಅಧಿಕಾರಿ ನವೀನ್ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಉದ್ಯೋಗಕ್ಕಾಗಿ 9,855 ನೋಂದಣಿ ಮಾಡಿಕೊಂಡಿದ್ದು, 74 ಅಲ್ಪಸಂಖ್ಯಾತರು ಇದ್ದಾರೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತಾ ಇಲಾಖೆಗೆ ಸಂಬಂಧಿಸಿದ ಮಾಹಿತಿ ಒದಗಿಸಿದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಯೋಜನೆಗಳ ಅನುಷ್ಠಾನ ಹಾಗೂ ಸರ್ಕಾರದ ಸೌಲಭ್ಯಗಳು ಅಲ್ಪಸಂಖ್ಯಾತರಿಗೆ ಸಮರ್ಪಕವಾಗಿ ತಲುಪುತ್ತಿದೆ. ಈ ಸಂಬಂಧ ಅಗತ್ಯ ಕ್ರಮವಹಿಸಲಾಗಿದೆ’ ಎಂದು ತಿಳಿಸಿದರು.

ಜಿ.ಪಂ. ಸಿಇಒ ಕೆ.ಆರ್. ನಂದಿನಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ ಜಫಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಣ್ಣ, ಕೌಶಲಾಭಿವೃದ್ಧಿ ಅಧಿಕಾರಿ ಎನ್.ದಿವ್ಯಶ್ರೀ, ಆಯೋಗದ ಸದಸ್ಯರಾದ ಅಮ್ಜದ್ ಪಾಷ, ಉಬೇದ್ ಉಲ್ಲಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-1302367654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.