ಮಂಡ್ಯ: ‘ರಾಸುಗಳಿಗೆ ವಿಮೆ ಮಾಡಿಸುವುದರಿಂದ ರೈತರಿಗೆ ಅನುಕೂಲವಾಗುತ್ತದೆ. ಇದರ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಜಾಗೃತಿ ಮೂಡಿಸಬೇಕು’ ಎಂದು ಶಾಸಕ ಪಿ.ರವಿಕುಮಾರ್ ಸಲಹೆ ನೀಡಿದರು.

ತಾಲ್ಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತಿದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ 9ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಸುಗಳ ಪ್ರಾಣಕ್ಕೆ ತೊಂದರೆಯಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ್ದರೆ ನಷ್ಟದ ಪರಿಹಾರ ತುಂಬಿಕೊಳ್ಳಲು ಸಾಧ್ಯವಾಗುತ್ತದೆ. ಇಲ್ಲವಾದರೆ ರೈತರ ಸಂಕಷ್ಟಕ್ಕೆ ಒಳಗಾಗುತ್ತಾರೆ. ರೈತರು ತಪ್ಪದೆ ರಾಸುಗಳಿಗೆ ವಿಮೆ ಮಾಡಿಸುವ ಮೂಲಕ ಜಾಗೃತರಾಗಬೇಕು’ ಎಂದು ತಿಳಿಸಿದರು.

ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ‘ಲಕ್ಷ ಲಕ್ಷ ಕೊಟ್ಟು ಹಸುಗಳನ್ನು ಖರೀದಿ ಮಾಡಿರುವ ರೈತರಿಗೆ ನಷ್ಟ ಆಗಬಾರದೆಂಬ ದೃಷ್ಟಿಯಿಂದಲೇ ರಾಸುಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ. ರೈತರು ಕಷ್ಟದಿಂದ ಪಾರಾಗುವ ಕಡೆ ಹೆಚ್ಚು ಗಮನ ಹರಿಸಬೇಕು. ಸರ್ಕಾರದಿಂದ ಸಿಗುವ ಯೋಜನೆಗಳನ್ನು ಬಳಸಿಕೊಳ್ಳಬೇಕು’ ಎಂದರು.

ಪಶುವೈದ್ಯಾಧಿಕಾರಿ ಡಾ.ಸುರೇಶ್ ಮಾತನಾಡಿ, ‘ಹಸುಗಳಿಗೆ ಕಾಲು ಬಾಯಿ ಜ್ವರದ ಲಸಿಕೆ ಹಾಕಿಸಿದರೆ ಆರೋಗ್ಯ ಕಾಪಾಡಿಕೊಳ್ಳುವುದು ಅಲ್ಲದೇ ಹಾಲಿನ ಗುಣಮಟ್ಟ ಹೆಚ್ಚಳವಾಗುತ್ತದೆ. ಹಸುಗಳ ಆರೋಗ್ಯವು ಪ್ರಮುಖವಾಗಿರುತ್ತದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮನುಕುಮಾರ್, ನಿರ್ದೇಶಕರಾದ ಮಹೇಶ್, ಶಿವರಾಮು, ಮಾಜಿ ಅಧ್ಯಕ್ಷ ಆನಂದ್, ಪಶುವೈದ್ಯಾಧಿಕಾರಿ ಡಾ.ಶರತ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-1081164833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.