ಕೃಷ್ಣರಾಜಸಾಗರ ಜಲಾಶಯ ಮೊದಲ ಬಾರಿಗೆ ಜೂನ್‌ನಲ್ಲೇ ಭರ್ತಿಯಾದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎನ್.ಚಲುವರಾಯಸ್ವಾಮಿ ಬಾಗಿನ ಅರ್ಪಿಸಿದ ದೃಶ್ಯ
ಶ್ರೀರಂಗಪಟ್ಟಣದಲ್ಲಿ ನಡೆದ ಜಂಬೂ ಸವಾರಿಗೆ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಚಾಲನೆ ನೀಡಿದರು
ಕನ್ನಡ ನಾಡುನುಡಿ ಜಾಗೃತಿ ಸಮಿತಿ ಆಶ್ರಯದಲ್ಲಿ ಮಂಡ್ಯ ನಗರದ ಕಲಾಮಂದಿರಲ್ಲಿ ಹಮ್ಮಿಕೊಂಡಿದ್ದ ‘ಕನ್ನಡ ಜಾಗೃತಿ ಸಮಾವೇಶ’ವನ್ನು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು
ಜಿಲ್ಲಾಧಿಕಾರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ
ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ಕಾಲುವೆಯಿಂದ ಕಾಡಾನೆಯನ್ನು ಮೇಲೆ ತರಲು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ದೃಶ್ಯ
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಡ್ಯಾಂ ಮುಂಭಾಗದ ದೋಣಿ ವಿಹಾರ ಸ್ಥಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಕಾವೇರಿ ಆರತಿ’ ಬೆಳಗಿದರು
ಮಳವಳ್ಳಿಯ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸ್ಮರಣಿಕೆ ನೀಡಿ ಗೌರವಿಸಿದರು
ಮೇಲುಕೋಟೆಯಲ್ಲಿ ಚೆಲುವನಾರಾಯಣ ಸ್ವಾಮಿಯ ‘ವೈರಮುಡಿ ಬ್ರಹ್ಮೋತ್ಸವ’ ಸಾವಿರಾರು ಭಕ್ತರ ಸಮಕ್ಷಮದಲ್ಲಿ ವಿಜೃಂಭಣೆಯಿಂದ ನೆರವೇರಿತು
ಉಪಲೋಕಾಯುಕ್ತ ಬಿ.ವೀರಪ್ಪ ಅವರು ಮಂಡ್ಯದಲ್ಲಿ ಸಾರ್ವಜನಿಕ ಅಹವಾಲು ದೂರು ವಿಚಾರಣೆ ಮತ್ತು ಬಾಕಿ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ 87ನೇ ನುಡಿಜಾತ್ರೆಯ ‘ಬೆಲ್ಲದಾರತಿ’ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಮೀರಾ ಶಿವಲಿಂಗಯ್ಯ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಜಿಲ್ಲಾಧಿಕಾರಿ ಕುಮಾರ ಶಾಸಕ ಪಿ.ರವಿಕುಮಾರ್ ಸಚಿವ ಎನ್.ಚಲುವರಾಯಸ್ವಾಮಿ ನಿರ್ಮಲಾನಂದನಾಥ ಸ್ವಾಮೀಜಿ ಸಾಹಿತಿ ಗೊ.ರು. ಚನ್ನಬಸಪ್ಪ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪಾಲ್ಗೊಂಡಿದ್ದರು
ಜಲಶಕ್ತಿ ಅಭಿಯಾನದ ಅಂಗವಾಗಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಯನ್ನು ನವದೆಹಲಿಯ ವಿಜ್ಞಾನ ಭವನದಲ್ಲಿ ಈಚೆಗೆ ನಡೆದ ‘ರಾಷ್ಟ್ರೀಯ ಜಲ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಅವರಿಗೆ ಪ್ರದಾನ ಮಾಡಿದರು. ರಾಜ್ಯ ಸಚಿವ ವಿ.ಸೋಮಣ್ಣ ಇದ್ದಾರೆ
ಮಂಡ್ಯ ತಾಲ್ಲೂಕಿನ ಆಲಕೆರೆಯಲ್ಲಿ 24 ವರ್ಷಗಳ ನಂತರ ನಡೆದ ವೀರಭದ್ರೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕೊಂಡೋತ್ಸವ ವೈಭವದಿಂದ ನಡೆಯಿತು
ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿ ಕೊನ್ನಾಪುರ ಗ್ರಾಮದ ಪ್ರೇಮಾ ಅವರ ಮನೆಗೆ ಭೇಟಿ ನೀಡಿದ್ದ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು