ಮಂಡ್ಯ: ತಾಲ್ಲೂಕಿನ ಮುದ್ದನಘಟ್ಟ ಸಮೀಪ ಪ್ರಾರಂಭಿಸುತ್ತಿರುವ ‘ಆಟೋಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಎಆರ್ಎಐ) ಪರೀಕ್ಷಾ ಕೇಂದ್ರ ಸ್ಥಾಪಿಸುವ ಕುರಿತಂತೆ ಚರ್ಚೆ ಮಾಡಲು ಏ.13ರಂದು ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗಿದೆ.

ನಗರದಲ್ಲಿ ಈಚೆಗೆ ನಡೆದ ದಿಶಾ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಾತು ಕೊಟ್ಟಂತೆ ಶಾಸಕ ಪಿ.ರವಿಕುಮಾರ್ ಅವರು ರಾಜ್ಯ ಸರ್ಕಾರದ ಪ್ರತಿನಿಧಿಗಳೊಂದಿಗೆ ಸಭೆ ಆಯೋಜಿಸಿದ್ದಾರೆ.

ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಏ.13ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಸಭೆ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಸಹ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸರ್ಕಾರದ ಭವ್ಯ ಯೋಜನೆ-ನಿಯಮಾವಳಿಯಡಿ ಮಂಡ್ಯದಲ್ಲಿ ಎಆರ್ಎಐ ಕೇಂದ್ರ ಮತ್ತು ಕೈಗಾರಿಕಾ ಸಮೂಹಗಳ ಅಭಿವೃದ್ಧಿಗಾಗಿ ಭೂಮಿ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-40-842048708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.