ಮದ್ದೂರು: ನಿವೇಶನ ಮತ್ತು ವಸತಿರಹಿತರಿಗೆ ಸರ್ಕಾರದಿಂದ ಆಶ್ರಯ ಯೋಜನೆಯಡಿ ನಿವೇಶನ ನೀಡಬೇಕಿದೆ. ಯಾವುದೇ ಲೋಪವಿಲ್ಲದಂತೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಶಾಸಕ ಕೆ.ಎಂ. ಉದಯ್ ಸೂಚನೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರು ಹಾಗೂ ಮೂಲಸೌಕರ್ಯಗಳ ಬಗ್ಗೆ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವು ಗ್ರಾಮಗಳಲ್ಲಿ ಆಶ್ರಯ ಯೋಜನೆಗೆ ಮೀಸಲಿಟ್ಟಿರುವ ಜಾಗಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪಿಡಿಒಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ, ‘ಸಂಬಂಧಪಟ್ಟ ಪಿಡಿಒಗಳು ಸರ್ವೆ ನಡೆಸಲು ತಾಲ್ಲೂಕು ಕಚೇರಿಗೆ ಕೂಡಲೇ ಅರ್ಜಿ ಕೊಡಿ. ಸರ್ವೆ ನಡೆಸಿದ ಬಳಿಕ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಿ’ ಎಂದು ಸೂಚನೆ ನೀಡಿದರು.

ಗ್ರಾಮ ಆಡಳಿತ ಅಧಿಕಾರಿ ಮತ್ತು ಕಂದಾಯ ನಿರೀಕ್ಷಕರು ಸಂಬಂಧಪಟ್ಟ ಪಿಡಿಒಗಳೊಂದಿಗೆ ಸ್ಥಳಕ್ಕೆ ಹೋಗಿ ಜಾಗ ಗುರುತಿಸಬೇಕು. ನಂತರ ಅರ್ಹ ವಸತಿರಹಿತ ಬಡವರನ್ನು ಗುರುತಿಸಬೇಕು. ಈ ವಿಷಯದಲ್ಲಿ ಯಾವುದೇ ಗೊಂದಲ, ತೊಂದರೆಗಳು ಇದ್ದರೆ ತಹಶೀಲ್ದಾರ್ ಹಾಗೂ ಇಒ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಅಷ್ಟೇ ಅಲ್ಲದೇ ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಇರುವ ಗೋಮಾಳ ಸೇರಿದಂತೆ ಇತರೆ ಸರ್ಕಾರಿ ಜಾಗಗಳನ್ನು ಗುರುತಿಸಬೇಕು ಎಂದರು.

ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, 'ತಾಲ್ಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಒಟ್ಟು 41.16 ಎಕರೆ ಜಾಗವನ್ನು ಆಶ್ರಯ ಯೋಜನೆಗೆ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕ ಉದಯ್ ಮಾತನಾಡಿ, ‘ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ ಮತ್ತು ಸ್ಮಶಾನ ಒತ್ತುವರಿ ತೆರವುಗೊಳಿಸಿ. ಸ್ಮಶಾನ ಇಲ್ಲದ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಿ’ ಎಂದರು.

ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಮಲಿಂಗಯ್ಯ, ತಾ.ಪಂ. ಯೋಜನಾಧಿಕಾರಿ ಸುರೇಶ್, ತಾಲ್ಲೂಕು ಭೂಮಾಪನಾಧಿಕಾರಿ ಲಿಖಿತಾ ಸೇರಿದಂತೆ ತಾಲ್ಲೂಕಿನ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-642830512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.