ಮಂಡ್ಯ: ಉಪಮುಖ್ಯಮಂತ್ರಿ ಮತ್ತು ಸಚಿವ ಸ್ಥಾನವನ್ನು ಪರಿಶಿಷ್ಟ ಜಾತಿ(ಬಲಗೈ) ಸಮುದಾಯಕ್ಕೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಕಾರ್ಯಕರ್ತರು ನಗರದ ಜೆ.ಸಿ. ವೃತ್ತದಲ್ಲಿ ಮಂಗಳವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರವು ಉಪ ಮುಖ್ಯಮಂತ್ರಿ ಸ್ಥಾನ ನೀಡದೇ ವಂಚಿಸುತ್ತಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ರಪಡಿಸಿದರು. ಕಾಂಗ್ರೆಸ್ ಪಕ್ಷವನ್ನು ಹೆಚ್ಚಾಗಿ ನಮ್ಮ ಬಲಗೈ ಸಮುದಾಯವೇ ಬೆಂಬಲಿಸುತ್ತಿದೆ ಎಂಬುದನ್ನು ಮರೆತಂತಿದೆ ಎಂದು ಕಿಡಿಕಾರಿದರು. ದಲಿತರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂಬುದನ್ನು ಹೇಳಿ ಈಗ ಮಾತು ತಪ್ಪಿದೆ. ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟದಲ್ಲಿ ಬಲಗೈ ಸಮುದಾಯದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಏಳು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮುಖಂಡರಾದ ಕೃಷ್ಣ, ಬಸವರಾಜು, ಶ್ರೀಧರ್, ಪ್ರೇಮ್ ಕುಮಾರ್, ಕಬ್ಬಾಳಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-40-1328279888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.