ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ಕಾವೇರಿ ನದಿಗಿಳಿದು ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿರುವುದರಿಂದ, ಬಲಮುರಿ ಪ್ರವಾಸಿಗರ ಸುರಕ್ಷತೆಯ ಆದ್ಯತೆಗೆ ಸಮಿತಿ ರಚಿಸಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕುಮಾರ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ಪ್ರವಾಸಿ ತಾಣಕ್ಕೆ ಸಂಬಂಧಿಸಿ ಸೋಮವಾರ ಮುಂಜಾಗ್ರತಾ ಕ್ರಮ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಬಲಮುರಿ ಪ್ರವಾಸಿ ತಾಣವಾಗಿದೆ. ಮೋಜು, ಮಸ್ತಿಯ ನೆಪದಲ್ಲಿ ಅಮಾಯಕರು ಪ್ರಾಣ ಕೆಳೆದುಕೊಳ್ಳುವುದನ್ನು ತಡೆಯುವುದು ನಮ್ಮ ಜಿಲ್ಲಾಡಳಿತದ ಮೂಲ ಉದ್ದೇಶ. ಇದಕ್ಕೆ ಎಲ್ಲ ಪ್ರವಾಸಿಗರು ಸಹಕರಿಸಬೇಕು. ತಮ್ಮ ಅಮೂಲ್ಯ ಜೀವನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಯನ್ನು ಪೊಲೀಸ್ ಇಲಾಖೆ ನೀಡಬೇಕು. ಪ್ರವಾಸೋದ್ಯಮ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಬಲಮುರಿ ಮತ್ತು ಸುತ್ತಮುತ್ತಲಿನ ಅಪಾಯಕಾರಿ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗೆ ಇಳಿಯುವುದನ್ನು ಮತ್ತು ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಹಾಗೂ ಸುರಕ್ಷತೆ ಇಲ್ಲದ ತೆಪ್ಪ ಬಳಸುವುದನ್ನು ನಿಷೇಧಿಸಿದೆ ಎಂದು ತಿಳಿಸಿದರು.

ನದಿಯ ನೀರಿನ ತೀವ್ರತೆ ಹಾಗೂ ನೀರಿನ ಆಳದ ಅರಿವಿಲ್ಲದೆ ಪ್ರವಾಸಿಗರು ನೀರಿಗಿಳಿದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಸಾರ್ವಜನಿಕರು ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮ, ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಒಳಗೊಂಡಂತೆ ಸಮಿತಿಯೊಂದನ್ನು ರಚಿಸಲಾಗಿದೆ. ನದಿ ಪಾತ್ರದ ಅಪಾಯಕಾರಿ ವಲಯಗಳಲ್ಲಿ ದೊಡ್ಡದಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರವಾಸಿಗರಿಗೆ ಅನುಕೂಲವಾಗುವಂತೆ ಸ್ಧಳದ ಬಗ್ಗೆ ಮಾರ್ಗದರ್ಶನ ನೀಡಲು ಹೋಂಗಾರ್ಡ್ ನೇಮಕ ಮಾಡಬೇಕು. ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಬೇಕು. ಧ್ವನಿವರ್ಧಕ ಮೂಲಕ ಪ್ರವಾಸಿಗರಿಗೆ ಮಾಹಿತಿ ನೀಡಬೇಕು. ನದಿಯ ಆಳ ಹಾಗೂ ಸುಳಿಗಳಿರುವ ಅಪಾಯಕಾರಿ ಜಾಗಗಳ ಬಳಿ ಯಾರಾದರೂ ಪ್ರವಾಸಿಗರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸ್ಥಳೀಯ ನಿವಾಸಿಗಳು ಹಾಗೂ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಮಾತನಾಡಿ, ಕಾವೇರಿ ನದಿ ತಟದಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಲು ಗೃಹ ರಕ್ಷಕ ದಳದ ಸಿಬ್ಬಂದಿ ನಿಯೋಜಿಸಬೇಕು. ಬಲಮುರಿಯಿಂದ ಪೊಲೀಸರು ನಿರಂತರ ನಿಗಾವಹಿಸುತ್ತಾರೆ. ಹಾಗೆಯೇ ಸ್ಥಳೀಯರು ಸಹ ಮಾಹಿತಿ ನೀಡಿ ನೆರವಾಗಬೇಕು ಎಂದು ಮನವಿ ಮಾಡಿದರು.

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ವೆಂಕಟರಮಣಪ್ಪ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-40-1255692659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.