ಮಂಡ್ಯ: ಹಿಂದೂಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಲಿದಾನ ದಿವಸ ಕಾರ್ಯಕ್ರಮವನ್ನು ಮಾರ್ಚ್ 23ರಂದು ಸಂಜೆ 5ಕ್ಕೆ ಮದ್ದೂರು ಟೌನ್ನ ಹಳೆ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಸಂಚಾಲಕ ಕೆ.ಯೋಗಾನಂದ್ ಹೇಳಿದರು.

ಕಾರ್ಯಕ್ರಮಕ್ಕೂ ಅಂದು ಮುನ್ನ ಸಂಜೆ 4 ಗಂಟೆಗೆ ತಾಲ್ಲೂಕು ಕೇಂದ್ರದ ಟಿ.ಬಿ.ವೃತ್ತದಿಂದ ವೇದಿಕೆವರೆಗೆ ಶೋಭಾಯಾತ್ರೆ ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ನಿಶ್ಚಲಾನಂದನಾಥ ಸಾಮೀಜಿ ಅಧ್ಯಕ್ಷತೆ ವಹಿಸುವರು. ಮೈಸೂರಿನ ಸ್ವರ್ಣನೃಸಿಂಹದತ್ತಸಾಯಿ ಪೀಠಿಕಾ ಸೇವಾ ಟ್ರಸ್ಟ್ನ ಅರ್ಜುನ ಅವಧೂತ ಅವರಿ ಪ್ರಾಸ್ತಾವಿಕವಾಗಿ ಮಾತನಾಡುವರು.ಮಾಜಿ ಸಚಿವ ಅನಂತಕುಮಾರ ಹೆಗಡೆ ಅವರು ಶೋಭಾಯಾತ್ರೆಗೆ ಚಾಲನೆ ನೀಡುವರು. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಖ್ಯ ಭಾಷಣ ಮಾಡುವರು. ವಿವೇಕವಂಶಿ ಫೌಂಡೇಷನ್ ಸ್ಥಾಪಕ ಎಸ್.ಬಿ.ನಿತ್ಯಾನಂದ ದಿಕ್ಸೂಚಿ ಭಾಷಣ ಮಾಡುವರು ಎಂದರು.

ಒಕ್ಕೂಟದ ಸಂಚಾಲಕರಾದ ಕೆ.ಯೋಗಾನಂದ್, ಮಲ್ಲಿಕಾರ್ಜುನ್, ಜಗನ್ನಾಥ್, ಅನಿಲ್ ಮರಿಗೌಡ, ವೀರಭದ್ರಸ್ವಾಮಿ, ಮನು ಸೋಮನಹಳ್ಳಿ, ಶ್ರೀನಿವಾಸ್ ಶೆಟ್ಟಿ, ಗುರುಮಲ್ಲೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-40-1754183403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.