ಮಂಡ್ಯ: ರಜೆ ನಿಯಮಗಳು ಸೇರಿದಂತೆ ಎಲ್ಲ ಸೇವಾ ನಿಯಮಗಳನ್ನು ಇತರೆ ಸಾರ್ವಜನಿಕ ವಲಯದ ಬ್ಯಾಂಕ್ನಲ್ಲಿರುವಂತೆ ತಿದ್ದುಪಡಿ ಮಾಡಬೇಕು ಹಾಗೂ ಅಗತ್ಯ ಸೇವಾ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳ ಸಂಘದಿಂದ ನಗರದಲ್ಲಿ ಬುಧವಾರ ಧರಣಿ ನಡೆಯಿತು.

ಬ್ಯಾಂಕ್ ಪ್ರಧಾನ ಕಚೇರಿ ಎದುರು ಧರಣಿ ನಡೆಸಿದ ಉದ್ಯೋಗಿಗಳು, ನ್ಯಾಯಯುತ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕೆಂದು ಆಗ್ರಹಿಸಿದರು.

ಗ್ರಾಮೀಣ ಬ್ಯಾಂಕ್ಗಳು ದೇಶದ ಗ್ರಾಮೀಣ ಆರ್ಥಿಕತೆಯ ಪ್ರಮುಖ ಪಾತ್ರ ವಹಿಸಿವೆ. ಆದರೆ ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಸಮಾನ ಹಕ್ಕುಗಳು ಮತ್ತು ಸೌಲಭ್ಯಗಳು ಇನ್ನೂ ಲಭ್ಯವಾಗಿಲ್ಲ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ದಿನಗೂಲಿ, ಹೊರಗುತ್ತಿಗೆ, ಕ್ಯಾಸುವಲ್ ಕಾರ್ಮಿಕರನ್ನು ಕಾಯಂಗೊಳಿಸಲು ಸ್ಪಷ್ಟವಾದ ಯೋಜನೆ ರೂಪಿಸಬೇಕು. ಪಿಎಲ್ಐ ಅನ್ನು ತಕ್ಷಣ ಜಾರಿಗೆ ತರಬೇಕು. ಇತರೆ ಬ್ಯಾಂಕ್ಗಳ ಮಾನದಂಡದಂತೆ ನ್ಯಾಯಸಮ್ಮತ ವರ್ಗಾವಣೆ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಎಲ್ಲ ಹುದ್ದೆಗಳಲ್ಲಿನ ಖಾಲಿ ಸ್ಥಾನಗಳನ್ನು ತಕ್ಷಣ ಭರ್ತಿ ಮಾಡಬೇಕು. ಪದೋನ್ನತಿ ಹುದ್ದೆಗಳಲ್ಲಿ ನಿಯೋಜಿಸಲಾದ ಡೆಪ್ಯುಟೇಶನ್ ಅಧಿಕಾರಿಗಳನ್ನು ಹಿಂಪಡೆದು ಸ್ಥಳೀಯ ಸಿಬ್ಬಂದಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎಚ್. ನಾಗಭೂಷಣರಾವ್, ಸಂಘದ ಪ್ರಧಾನ ಕಾರ್ಯದರ್ಶಿ ಕೀರ್ತಿರಾಜ್, ಖಜಾಂಚಿ ನರಸಿಂಹರಾವ್, ಕಾರ್ಯಾಧ್ಯಕ್ಷ ಆರ್. ವಸಂತ್ಕುಮಾರ್, ಜಿಲ್ಲಾ ಕಾರ್ಯದರ್ಶಿ ಹರೀಶ್, ಬಿಂದಿಯ, ನಿತಿನ್, ವಿಜಯ್ಕುಮಾರ್, ಕೇಂದ್ರ ಸಮಿತಿ ಸದಸ್ಯ ರಾಜಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-721686971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.