ಮಂಡ್ಯ: ತಾಲ್ಲೂಕಿನ ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತು ಆಸುಪಾಸಿನ ಗ್ರಾಮಗಳ (ಎಲೆಚಾಕನಹಳ್ಳಿ ಏತ ನೀರಾವರಿ ಯೋಜನೆ) ಕೆರೆ ಕಟ್ಟೆಗಳಿಗೆ ಲೋಕಪಾವನಿ ನದಿಯಿಂದ ನೀರು ತುಂಬಿಸಲು ಅನುವು ಮಾಡಿಕೊಟ್ಟ ನೆನಪಿಗಾಗಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ದಂಪತಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಏಪ್ರಿಲ್ 7ರಂದು ಬೆಳಿಗ್ಗೆ 11 ಗಂಟೆಗೆ ಎಲೆಚಾಕನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಶಾಸಕ ರಮೇಶ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಚನ್ನಮ್ಮ ಹಾಗೂ ಬಸವರಾಜ ಬೊಮ್ಮಾಯಿ ದಂಪತಿ ಗೌರವ ಸ್ವೀಕಾರ ಮಾಡಲಿದ್ದಾರೆ. ಪ್ರಗತಿಪರ ರೈತ ಹಾಗೂ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್ ಅವರಿಗೆ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಸನ್ಮಾನಿಸಲಿದ್ದಾರೆ.

ತೆಂಗಿನ ಸಸಿ ವಿತರಣೆ ಹಾಗೂ ರಂಗೋಲಿ ಸ್ಪರ್ಧೆ ವಿಜೇತರಿಗೆ ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ. ಪ್ರೌಢಶಾಲೆಗೆ ಜಾಗ ಖರೀದಿಸಲು ಧನ ಸಹಾಯ ಮಾಡಿದ ದಾನಿಗಳಾದ ಮನ್ವತ್ ಎಂ.ಎನ್, ಅಶೋಕ್ ಗೌಡ ಪಟೇಲ್, ಕಾಳೇಗೌಡ ಅವರಿಗೆ ಸನ್ಮಾನ ನಡೆಯಲಿದೆ.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಅವರಿಗೆ ಗೌರವ ನಮನ ಸಲ್ಲಿಸಲಾಗುವುದು ಎಂದು ಎಲೆಚಾಕನಹಳ್ಳಿ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-40-1083753501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.