ಮದ್ದೂರು: ಬೆಸಗರಹಳ್ಳಿ ಭಾಗದ ವಿ.ಸಿ. ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಅಲ್ಲಿಯ ಅಡ್ಡರಸ್ತೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಈರೇಗೌಡನದೊಡ್ಡಿ,ಬೆಸಗರಹಳ್ಳಿ, ಹೊಸಕೆರೆ, ಆನೆದೊಡ್ಡಿ, ಕೊತ್ತನಹಳ್ಳಿ, ಸೊಳ್ಳೆಪುರ, ಹಲವು ಗ್ರಾಮಗಳ ರೈತರು ರಸ್ತೆತಡೆ ನಡೆಸಿದ್ದರ ಪರಿಣಾಮ ಮದ್ದೂರು-ಕೊಪ್ಪ - ಬೆಸಗರಹಳ್ಳಿ ರಸ್ತೆ ಸಂಚಾರಕ್ಕೆ ಕೆಲಕಾಲ ತೊಂದರೆಯುಂಟಾಗಿತ್ತು. ರೈತ ಸಂಘದ ಕಾರ್ಯಕರ್ತರು ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಕೂಡಲೇ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಜಿ.ಪ್ರಭುಲಿಂಗು ಮಾತನಾಡಿ, ತಾಲ್ಲೂಕಿನ ಕೊಪ್ಪ ಹಾಗೂ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗಕ್ಕೆ ಅಧಿಕಾರಿಗಳು ಸಮರ್ಪಕವಾಗಿ ನೀರು ಹರಿಸದ ಪರಿಣಾಮ ಬೆಳೆಗಳು ಒಣಗಿ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಈ ಕೂಡಲೇ ನೀರು ಹರಿಸಲು ನೀರಾವರಿ ಇಲಾಖೆಗೆ ಜಿಲ್ಲಾಡಳಿತ ಸೂಚಿಸಬೇಕೆಂದು ಆಗ್ರಹಿಸಿದರು.

ಕೆ.ಆರ್.ಎಸ್. ಜಲಾಶಯದಲ್ಲಿ ಹಿಂಡೆಲ್ಲ 66 ಅಡಿ ನೀರಿದ್ದರೂ ಕೊನೆ ಭಾಗಕ್ಕೆ ನೀರು ಬರುತ್ತಿತ್ತು. ೀ ಬಾರಿ 104 ಅಡಿ ನೀರಿದ್ದರೂ ರೈತರ ಬೇಸಾಯಕ್ಕೆ ನೀರನ್ನು ಏಕೆ ನೀಡಲಾಗುತ್ತಿಲ್ಲ ಎಂದು ಪ್ರಶ್ನಿಸಿದರು. 3 ದಿನಗಳಲ್ಲಿ ವಿಶ್ವೇಶ್ವರಯ್ಯ ನಾಲೆ ಕೊನೆ ಭಾಗಗಳಿಗೆ ನೀರು ಹರಿಸಿ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಲು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಮುಂದಾಗದಿದ್ದಲ್ಲಿ ವಿವಿಧ ಸಂಘಟನೆಗಳ ಜತೆಗೂಡಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಸ್ಥಳಕ್ಕೆ ಬಂದಿದ್ದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಸಿದರು.

ರೈತ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ಸಾವಿರಾರು ರೂಪಾಯಿ ಖರ್ಚು ಮಾಡಿ ವ್ಯವಸಾಯ ಮಾಡಿದ್ದೇವೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ನಮ್ಮ ಬೆಳೆಗಳು ನೀರಿಲ್ಲದೆ ಒಣಗಿಗುತ್ತಿದೆ. ಸರ್ಕಾರ ವಿಮಾ ಯೋಜನೆಯನ್ನೂ ನೀಡಿಲ್ಲ. ಅಧಿಕಾರಿಗಳೇ ಪರಿಹಾರ ನೀಡಬೇಕು ಎಂದರು. ಕೆರಗೋಡು ವಿಭಾಗದ ನೀರಾವರಿ ನಿಗಮದ ಅಧಿಕಾರಿಗಳು ಮೇಲಧಿಕಾರಿಗಳಿಗೆ ಸಮರ್ಪಕವಾಗಿ ಮಾಹಿತಿ ನೀಡದ ಪರಿಣಾಮ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳು ಮಣ್ಣು ಪಾಲಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರಾವರಿ ನಿಗಮದ ಎಇಇ ಅಜಯ್ ರೈತರ ಮನವಿ ಸ್ವೀಕರಿಸಿ ಮಾತನಾಡಿ, ಮೇಲಧಿಕಾರಿಗಳ ಗಮನಕ್ಕೆ ತಂದು ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.

ರೈತ ಮುಖಂಡರಾದ ಸೊ. ಸಿ. ಪ್ರಕಾಶ್, ಶಿವಲಿಂಗಯ್ಯ,ಉಮೇಶ್, ಅಡ್ಡ ರಸ್ತೆ ಗೋಪಿ, ಎಚ್.ಎಲ್.ದಯಾನಂದ, ಕೆ.ಜಿ.ಉಮೇಶ್, ರಾಮಕೃಷ್ಣ, ಚನ್ನಪ್ಪ, ವೆಂಕಟೇಶ್, ಜಯರಾಮು, ಮುತ್ತುರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-40-155835152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.