ಬೆಳಕವಾಡಿ: ಸಮೀಪದ ಬೋಪ್ಪೇಗೌಡನಪುರ (ಬಿ.ಜಿ.ಪುರ) ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ವೀರಶೈವ ಸಮುದಾಯದಿಂದ ಶುಕ್ರವಾರ ರಾತ್ರಿ ಬಸವಣ್ಣನ ಭಾವಚಿತ್ರ ಹಾಗೂ ಮಠದ ಪಟ್ಟದ ಬಸವನ ಮೆರವಣಿಗೆ ನಡೆಯಿತು.

ಗ್ರಾಮದ ಗುರುಮಲ್ಲೇಶ್ವರ ಮಠದ ಆವರಣದಲ್ಲಿ ಬಸವಣ್ಣನ ಭಾವಚಿತ್ರವನ್ನು ವಾಹನದ ಮೇಲಿರಿಸಿ ಹಾಗೂ ಮಂಟೇಸ್ವಾಮಿ ಮಠದ ಪಟ್ಟದ ಬಸವನಿಗೆ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿ, ಕೊಂಬು, ಕಹಳೆ, ತಮಟೆ, ಮಂಗಳವಾದ್ಯಗಳೊಂದಿಗೆ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಠಕ್ಕೆ ತಂದು ಇರಿಸಲಾಯಿತು. ಬಿ.ಜಿ.ಪುರ ಹೊರ ಮಠದ ಶಿವರುದ್ರಸ್ವಾಮೀಜಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-212780757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.