ಶ್ರೀರಂಗಪಟ್ಟಣ: ‘ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರು ಅಕ್ಷರ, ಅನ್ನ ಮತ್ತು ಜ್ಞಾನ ದಾಸೋಹ ಕೈಂಕರ್ಯದಲ್ಲಿ ದೇಶದಲ್ಲೇ ಅತ್ಯುತ್ತಮ ಸೇವೆ ಸಲ್ಲಿಸಿದ್ದು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು’ ಎಂದು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ. ಶಂಕರಬಾಬು ಆಗ್ರಹಿಸಿದರು.

ತಾಲ್ಲೂಕಿನ ಬಾಬುರಾಯನಕೊಪ್ಪಲಿನಲ್ಲಿ ಮಂಡ್ಯ ರಕ್ಷಣಾ ವೇದಿಕೆ ಬುಧವಾರ ಏರ್ಪಡಿಸಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿಯಲ್ಲಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ‘ಸಿದ್ದಗಂಗಾ ಮಠ ಸಹಸ್ರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಬದುಕಿನ ದಾರಿ ತೋರಿದೆ. ಹಸಿದು ಬಂದವರಿಗೆ ಅನ್ನ ಹಾಕಿದೆ. ಶಾಂತಿ, ನೆಮ್ಮದಿ ಅರಸಿ ಬಂದವರಿಗೆ ಸಾಂತ್ವನ ಹೇಳಿದೆ. ಈ ಎಲ್ಲ ಸತ್ಕಾರ್ಯಗಳು ಶಿವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದಿದ್ದು, ಈಗಲೂ ಮುಂದುವರೆದಿವೆ. ಬಸವಣ್ಣನವರ ವಚನಗಳ ಸಾರದಂತೆಯೇ ಬದುಕಿದ ಸ್ವಾಮೀಜಿ ಇತರ ಮಠಾಧೀಶರಿಗೆ ಮಾದರಿಯಾಗಿದ್ದಾರೆ’ ಎಂದು ಹೇಳಿದರು.

ಕೃಷಿಕ ಸಮಾಜದ ನಿರ್ದೇಶಕ ಬಿ.ಎಂ. ಸುಬ್ರಹ್ಮಣ್ಯ ಮಾತನಾಡಿ, ‘ಶಿವಕುಮಾರ ಶ್ರೀಗಳು ಏಳು ದಶಕಗಳ ಕಾಲ ಅವಿರತ ಸೇವೆ ಸಲ್ಲಿಸಿದ್ದಾರೆ. ನಡೆದಾಡುವ ದೇವರು ಎಂಬ ಅಭಿದಾನ ಪಡೆದಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದರೆ ಪ್ರಶಸ್ತಿಯ ಮೌಲ್ಯ ಮತ್ತಷ್ಟು ಹೆಚ್ಚುತ್ತದೆ’ ಎಂದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಎನ್ಎಸ್ಎಸ್ ಅಧಿಕಾರಿ ಆರ್. ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ರೈತರ ಶಾಲೆ ಸಂಸ್ಥಾಪಕ ಗಂಜಾಂ ಸತ್ಯಮೂರ್ತಿ ಪ್ರಾಸ್ತಾವಿಕ ಮಾತುಗಳಾಡಿದರು. ಮಂಡ್ಯ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಬಳ್ಳೇಕೆರೆ ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ಜಿ.ಎನ್. ರವೀಶಗೌಡ, ಎಸ್. ವಿಜಯಕುಮಾರ್, ಎಸ್. ಸಾಗರ್, ಹೇಮಲತಾ ಹರಿಯಾಳ, ಎಂ.ಸಿ. ಪ್ರಕಾಶ್, ದೀಪು, ಎಚ್.ಎಸ್. ಭರತಕುಮಾರ್, ರಾಜೇಂದ್ರಬಾಬು, ನೂರ್ ಹುಸೇನ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯ ಪದಾಧಿಕಾರಿಗಳಾದ ಜಗದೀಶಗೌಡ, ವೀಣಾಬಾಯಿ, ಭಾಗ್ಯಮ್ಮ, ನಂದಿನಿ ಬಾಯಿ, ಅಶ್ವಿನಿ, ವರಲಕ್ಷ್ಮಿ, ಗ್ರಾ.ಪಂ. ಮಾಜಿ ಸದಸ್ಯ ಪ್ರಕಾಶ್, ಬಸವೇಗೌಡ, ಜವರೇಗೌಡ, ರಾಮಕೃಷ್ಣೇಗೌಡ ಭಾಗವಜಿಸಿದ್ದರು. ಸಿಹಿ ವಿತರಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-40-1289092628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.