ಭಾರತೀನಗರ: ‘ಶಿಕ್ಷಣ ಸೋಮಾರಿಗಳಿಗೆ ಒಲಿಯುವ ಸ್ವತ್ತಲ್ಲ. ಶಿಕ್ಷಣಕ್ಕೆ ಶ್ರಮವೆಂಬ ಬಂಡವಾಳ ಹಾಕಿದಾಗ ಮಾತ್ರ ಅದನ್ನು ಒಲಿಸಿಕೊಳ್ಳಬಹುದು’ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿಯ ಭಾರತೀ ಕಾಲೇಜು ಆವರಣದ ಕುವೆಂಪು ಸಭಾಂಗಣದಲ್ಲಿ ಭಾರತೀಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಿಯು ಕಾಲೇಜು ಆಡಳಿತಾಧಿಕಾರಿ ಎಸ್.ಜವರೇಗೌಡಗೌಡ ಮಾತನಾಡಿ, ‘ಇಂದು ದೇಶ–ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವವರು ಪಿಯುಸಿ ಎಂಬ ಪರ್ವಕಾಲವನ್ನು ದಾಟಿ ಸಾಧನೆಗೈದವರು ಮಾತ್ರ. ಜೀವನದಲ್ಲಿ ಪಿಯುಸಿ ಎಂಬುವುದು ಒಂದು ದೊಡ್ಡ ತಿರುವು ನೀಡಲಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಶೈಕ್ಷಣಿಕ ಹೆಜ್ಜೆ ಇಡಬೇಕು’ ಎಂದು ಸಲಹೆ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅವರನ್ನು ಭಾರತೀ ಪದವಿ ಪೂರ್ವ ಕಾಲೇಜು ವತಿಯಿಂದ ಅಭಿನಂದಿಸಲಾಯಿತು. ಪ್ರಾಂಶುಪಾಲೆ ಪಲ್ಲವಿ ಮಾತನಾಡಿದರು.

ಉಪನ್ಯಾಸಕ ನಾಗಮಾದಯ್ಯ, ದೈಹಿಕ ಶಿಕ್ಷಣ ನಿರ್ದೇಶಕಿ ಶೋಭಾ, ಉಪನ್ಯಾಸಕಿ ಕಾವ್ಯ, ಗ್ರಂಥಪಾಲಕ ಎ.ಎಸ್.ಸಂಜೀವ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-40-60039456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.