ಮಂಡ್ಯ: ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಅಣಕು ವಿಜಯೋತ್ಸವದ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ. ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಭಾವಚಿತ್ರದ ಮಾಸ್ಕ್ ಮುಖಕ್ಕೆ ಧರಿಸಿಕೊಂಡು ತಮಟೆ ಬಾರಿಸುತ್ತಾ, ತಮಟೆ ಸದ್ದಿಗೆ ಹೆಜ್ಜೆ ಹಾಕುವ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಮಾತನಾಡಿ, ‘ಹಗರಣಗಳ ಸರಮಾಲೆ, ಆಡಳಿತಾತ್ಮಕ ವೈಫಲ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಸಂಕಟಗಳಿಂದ ಬಳಲುತ್ತಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದೆ’ ಎಂದು ಟೀಕಿಸಿದರು.

‘ಆಡಳಿತಾತ್ಮಕ ವೈಫಲ್ಯಗಳ ಆರೋಪಗಳಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆದಿವೆ. ಪ್ರತ್ಯೇಕತೆಯ ಕೂಗು ಮತ್ತು ಪಾಕಿಸ್ತಾನ ಪರ ಘೋಷಣೆಗಳು ವಿಧಾನಸಭೆಯಲ್ಲಿ ಮೊಳಗಿದಾಗ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಆನಂದ್, ಗೊರವಾಲೆ ಶಿವಣ್ಣ, ಶಿವಕುಮಾರ್ ಆರಾಧ್ಯ, ನಾಗರಾಜು, ಶಿವಲಿಂಗಯ್ಯ, ಮಾದರಾಜೇ ಅರಸು, ಸಂತೋಷ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-40-256907604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.