ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಠಾಧೀಶರ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿದ್ದು, ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಈಡುಗಾಯಿ ಒಡೆದು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ. ವೃತ್ತದ ಬಳಿ ಜಮಾವಣೆಗೊಂಡ ಕಾರ್ಯಕರ್ತರು ವಾಟಾಳ್ ನಾಗರಾಜ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಾಟಾಳ್ ನಾಗರಾಜ್ ಅವರು ನಾಡು, ನುಡಿ ಹಾಗೂ ಸಂಸ್ಕೃತಿ ಪರವಾಗಿ ಹೋರಾಟ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ ಈಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರ ಹಾಗೂ ಕಾಂಗ್ರೆಸ್ ಏಜೆಂಟ್ ತರಹ ಮಾತನಾಡುವುದನ್ನು ಬಿಡಬೇಕು. ಕನ್ನಡಿಗರಿಗೆ ನಿಮ್ಮ ಮೇಲೆ ಅಪಾರ ಗೌರವವಿದೆ ಹೀಗಿದ್ದಾಗ ನೀವು ಕಾಂಗ್ರೆಸ್ ಪರವಾಗಿ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ರಾಜಕಾರಣ ಮಾಡಲೇ ಬೇಕು ಎಂದಿದ್ದರೆ ಈಗಲೇ ಕಾಂಗ್ರೆಸ್ ವಕ್ತಾರೆಂದು ಘೋಷಣೆ ಮಾಡಿಕೊಳ್ಳಿ, ಅದನ್ನು ಬಿಟ್ಟು ಮಠಾಧೀಶರ ಬಗ್ಗೆ, ಬಿಜೆಪಿ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ, ನಿಮ್ಮ ಮೇಲೆ ಅಪಾರಗೌರವ ಇರುವ ನಮ್ಮನ್ನು ಕೆರಳಿಸುವ ಕೆಲಸ ಮಾಡದೆ ತಕ್ಷಣ ಕ್ಷಮೆ ಕೇಳಬೇಕು ಎಂದು ಬಿಜಪಿ ವಕ್ತಾರ ಸಿ.ಟಿ.ಮಂಜುನಾಥ್ ಆಗ್ರಹಿಸಿದರು.

ಮುಖಂಡ ಶಿವಕುಮಾರ್ ಆರಾಧ್ಯ ಮಾತನಾಡಿ, ‘ನಾಡು ಕಂಡ ಪ್ರಬುದ್ಧ ರಾಜಕಾರಣಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಮಠಾಧೀಶರ ಬಗ್ಗೆ ಮಾತನಾಡುವುದು ಸರಿಯಲ್ಲ, ಲಕ್ಷಾಂತರ ಅಭಿಮಾನಿಗಳು ಬಂದು ಬಿಎಸ್ವೈ ಸಮಾರಂಭ ಮಾಡಿದ್ದಾರೆ, ಜಿಲ್ಲೆಗೆ ಬರಬೇಕಾದರೆ ಕ್ಷಮೆ ಕೇಳಿ ಬನ್ನಿ’ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ವಿವೇಕ್, ಹೊಸಹಳ್ಳಿ ಶಿವು, ಭೀಮೇಶ್, ಶಿವಲಿಂಗ, ಮಹೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-40-2028890831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.