ಮಂಡ್ಯ: ಬಿಜೆಪಿಗೆ ಅದರದೇ ಆದ ಮಹತ್ವವಿದ್ದು, ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಎಸ್.ಸುರೇಶ್ ಕುಮಾರ್ ಸಲಹೆ ನೀಡಿದರು.

ತಾಲ್ಲೂಕಿನ ಸಾತನೂರು ಗ್ರಾಮದ ಅಚೀವರ್ಸ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಭಾನುವಾರ ನಡೆದ ಪಂ.ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026, ಮಂಡ್ಯ ನಗರದ ಪ್ರಶಿಕ್ಷಣ ವರ್ಗ ಹಾಗೂ ಕಾರ್ಯಕರ್ತರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದೊಡ್ಡದಾಗಿ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಈ ಪಕ್ಷವು 1980ರಲ್ಲಿ ಸ್ಥಾಪನೆಯಾಗಿ, ಕೇವಲ ಎರಡು ಲೋಕಸಭಾ ಸ್ಥಾನಗಳಿಂದ ಜನರ ಆಶೀರ್ವಾದ ಪಡೆದು ದೇಶವನ್ನೇ ಆಳುವ ಮಟ್ಟಕ್ಕೆ ಬೆಳೆದು ಬಂದು ನಿಂತಿದೆ. ಪಕ್ಷ ನಡೆದು ಬಂದ ಹಾದಿ ನೋಡಿದರೆ ಅದು ರೋಚಕವಾಗಿದೆ’ ಎಂದರು.

ಬಿಜೆಪಿ ಮೈಸೂರು ವಿಭಾಗ ಸಹ ಪ್ರಭಾರಿ ಈ.ಸಿ. ನಿಂಗರಾಜೇಗೌಡ ಮಾತನಾಡಿ, ‘ಕಾರ್ಯಕರ್ತರಿಗಾಗಲಿ ಅಥವಾ ಮುಖಂಡರಿಗಾಗಲೀ ಬೇರೆ ರಾಜಕೀಯ ಪಕ್ಷಗಳಲ್ಲಿ ಇಂತಹ ಶಿಬಿರಗಳು ನಡೆಯುವುದಿಲ್ಲ, ಪಕ್ಷದ ಉದ್ದೇಶ ತಿಳಿಸುವುದು ಹಾಗೂ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದನ್ನು ಕಲಿಸುವುದು ಇಂತಹ ಶಿಬಿರಗಳು ಮಾತ್ರ. ಯಾವುದೇ ಚುನಾವಣೆ ಇರಲಿ ಅಲ್ಲಿ ನಮ್ಮ ಪಕ್ಷ ಸಕ್ರಿಯವಾಗಿರುವಂತೆ ನೋಡಿಕೊಂಡು ಅಭ್ಯರ್ಥಿ ಗೆಲ್ಲಿಸಿಕೊಂಡ ಬರೋಣ’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಂ, ಕಾರ್ಯದರ್ಶಿ ಎಚ್.ಆರ್. ಅಶೋಕ್, ನಗರ ಘಟಕದ ಅಧ್ಯಕ್ಷ ಪ್ರಸನ್ನ ಕುಮಾರ್, ಗ್ರಾಮಾಂತರ ಅಧ್ಯಕ್ಷ ಭೀಮೇಶ್, ರಾಜ್ಯ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ.ಸದಾನಂದ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-40-148805435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.