ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಬಾಲಕ ನಾಪತ್ತೆ: ಶೋಧ ಕಾರ್ಯ ಆರಂಭ

Published 11 ಜುಲೈ 2024, 15:37 IST
Last Updated 11 ಜುಲೈ 2024, 15:37 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಗುರುವಾರ ವಿಶ್ವೇಶ್ವರಯ್ಯ ನಾಲೆಯ ಬಳಿ ಆಟವಾಡುತ್ತಿದ್ದ ಬಾಲಕ ಸಬಿನ್‌ರಾಜ್‌ (4) ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಹೊನಗಳ್ಳಿಮಠ ಗ್ರಾಮದ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ. 

ಅಂಗನವಾಡಿಯಿಂದ ಬಂದು ಮನೆ ಸಮೀಪವಿರುವ ನಾಲೆ ಪಕ್ಕದಲ್ಲಿ ಆಟವಾಡುತ್ತಿದ್ದವನು ನಾಪತ್ತೆಯಾಗಿದ್ದಾನೆ. ಕಾಲುವೆ ಬಳಿ ಮಗು ಚಪ್ಪಲಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೆ.ಆರ್‌.ಎಸ್‌. ಜಲಾಶಯದಿಂದ ಬುಧವಾರದಿಂದ ನಾಲೆಗೆ ನೀರು ಹರಿಸಲಾಗಿದೆ. 

ಸ್ಥಳಕ್ಕೆ ಆಗಮಿಸಿದ ಮಂಡ್ಯ ಗ್ರಾಮಾಂತರ ಪೊಲೀಸರು ಬಾಲಕನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT