ಮಂಡ್ಯ: ರಾಜ್ಯದ ಬಜೆಟ್ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ನೌಕರರಿಗೆ ನೇರ ಪಾವತಿ ಪದ್ಧತಿಯನ್ನು ಘೋಷಿಸದ ಸರ್ಕಾರದ ನಡೆ ಖಂಡನೀಯ ಎಂದು ಆರೋಪಿಸಿ ಹೊರಗುತ್ತಿಗೆ ನೌಕರರು ನಗರಸಭೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರಸಭೆ ಕಚೇರಿ ಮುಂಭಾಗ ಜಮಾಯಿಸಿದ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಪೌರಾಯುಕ್ತ ಮಂಜುನಾಥ್ ಅವರಿಗೆ ಮನವಿ ನೀಡಿದರು.

ಈ ಬಾರಿ ಮುಖ್ಯಮಂತ್ರಿ ಅವರು ಮಂಡಿಸಿದ ಬಜೆಟ್ನಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸದೆ ಸರ್ಕಾರ ನಿರಾಶೆ ಮೂಡಿಸಿದೆ. ಜುಲೈನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಕಸ ಸಾಗಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯುಜಿಡಿ ಕಾರ್ಮಿಕರು ಡಾಟ ಆಪರೇಟರ್ಗಳು ಬೀದಿದೀಪ ನಿರ್ವಾಹಕರು, ಗಾರ್ಡನರ್ಗಳು, ಕಚೇರಿ ಸಹಾಯಕರು, ಸ್ಮಶಾನ ಕಾವಲುಗಾರರು ಸೇರಿದಂತೆ ಎಲ್ಲರನ್ನೂ ಪೌರ ಕಾರ್ಮಿಕರ ನೇರ ಪಾವತಿಗೆ ತರುವುದಾಗಿ ಸ್ವತಃ ಮುಖ್ಯಮಂತ್ರಿ ಘೋಷಿಸಿದ್ದರು. ಆದರೆ, ಬಜೆಟ್ನಲ್ಲಿ ಘೋಷಣೆ ಮಾಡದೆ ದ್ರೋಹವೆಸಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬಜೆಟ್ನಲ್ಲಿ ವಂಚಿಸುವ ಮೂಲಕ, ನಗರಗಳ ಸ್ವಚ್ಚತೆ ಕುಡಿಯುವ ನೀರಿನ ಸಮರ್ಪಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹೊರಗುತ್ತಿಗೆ ನೌಕರರನ್ನು ಬೀದಿಗೆ ತಳ್ಳುವ ಕೆಸಲ ಮಾಡಿದೆ. ಕೊರೋನಾ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ದುಡಿದ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ನೌಕರರಿಗೆ ಸರ್ಕಾರ ನೀಡುವ ಗೌರವ ಇದೇನಾ’ ಎಂದು ಪ್ರಶ್ನಿಸಿದರು.

ಫೆ.22 ರಂದು ಮುಖ್ಯಂಮತ್ರಿ ಮನೆ ಎದುರು ಧರಣಿ: ಹೊರ ಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸಲೇಬೇಕು ಎಂದು ಆಗ್ರಹಿಸಿ ಫೆ.22 ರಂದು ‘ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಎಂಬ ಘೋಷಣೆಯೊಂದಿಗೆ ಮುಖ್ಯಮಂತ್ರಿ ಅವರ ಮನೆ ಎದುರು ಧರಣಿ ನಡೆಸಲಾಗುವುದು ಎಂದು ತಿಳಿಸಿದರು.

ಮುಖಂಡರಾದ ಎಂ.ಬಿ.ನಾಗಣ್ಣಗೌಡ, ಮಣಿ, ಶಿವಕುಮಾರ, ಚನ್ನೇಶ, ವಿಜಯ್, ನದೀಮ್, ಹರೀಶ, ವಿಷ್ಣು, ಅನಿಲ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.