ಮಂಡ್ಯ: ಬಸ್ಗಳು ಸರಿಯಾದ ಸಮಯಕ್ಕೆ ಬರೆದೇ ಇರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಶಾಲಾ ಮತ್ತು ಕಾಲೇಜಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ಬಸ್ಗಳ ತೀವ್ರ ಕೊರತೆಯಿದೆ. ಹಲವು ಪ್ರಮುಖ ಮಾರ್ಗಗಳಲ್ಲಿ ನಿರಂತರ ಬಸ್ ಸೇವೆಯಿಲ್ಲದೇ ಪ್ರಯಾಣಿಸಲು ಅನಾನುಕೂಲವಾಗಿದೆ. ಬಹುತೇಕ ಬಸ್ ಚಾಲಕರು ಸಮಯ ಪಾಲನೆ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರು ತಮ್ಮ ದಿನನಿತ್ಯ ಕೆಲಸಗಳಿಗೆ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಬಸ್ಗಳನ್ನು ಓಡಿಸಬೇಕು. ಬಸ್ಗಳ ನಿರ್ವಹಣೆಗೆ ಹೆಚ್ಚು ಒತ್ತು ನೀಡಬೇಕು, ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಎಚ್.ಬಿ. ಪ್ರಜ್ವಲ್, ನಗರ ಕಾರ್ಯದರ್ಶಿ ಹರ್ಷ, ವಿದ್ಯಾರ್ಥಿಗಳಾದ ಗುರುಪ್ರಸಾದ್, ವಿದ್ಯಾರ್ಥಿಗಳಾದ ಕಿರಣ್, ನಂದೀಶ್, ರೇಖಾ, ಚರಣ್, ಸುಸ್ಮಿತಾ, ರೇಷ್ಮಾ, ಕೀರ್ತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.