ಮಂಡ್ಯ: ‘ಕೆರಗೋಡು ಹೋಬಳಿಯ ಶಿಂಷಾ ಹಾಗೂ ಮದ್ದೂರು ಫಿಕಪ್ ನಾಲೆಗಳು ಸೇರಿದಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಖಾ ನಾಲೆಗಳ ಆಧುನೀಕರಣಕ್ಕೆ ರಾಜ್ಯ ಸರ್ಕಾರ ₹100 ಕೋಟಿ ಅನುದಾನ ಮಂಜೂರು ಮಾಡಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಭರವಸೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಭಾಗದ ನಾಲಾ ಆಧುನೀಕರಣವು ರೈತರ ಬಹಳ ದಿನದ ಬೇಡಿಕೆಯಾಗಿತ್ತು. ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ’ ಎಂದರು.

‘₹33 ಕೋಟಿ ವೆಚ್ಚದಲ್ಲಿ ಶ್ರಮಿಕ ವಸತಿ ಶಾಲೆ ಪ್ರಾರಂಭಕ್ಕೆ ಬಜೆಟ್ನಲ್ಲಿ ಅನುಮೋದನೆ ನೀಡಲಾಗಿದೆ. ₹35 ಕೋಟಿ ವೆಚ್ಚದಲ್ಲಿ ಅಬ್ದುಲ್ ಕಲಾಂ ಅಲ್ಪಸಂಖ್ಯಾತರ ಶಾಲೆ ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ 5 ಎಕರೆ ಜಮೀನು ಕೇಳಿದ್ದಾರೆ. ಬಿ.ಹೊಸೂರು ಕಾಲೊನಿಯಲ್ಲಿ ಎರಡು ಎಕರೆ ಸಿದ್ಧವಿದ್ದು, ಉಳಿದ ಜಾಗಕ್ಕೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗಿದೆ’ ಎಂದರು.

‘ನಗರದ ಡಾ.ಬೆಸಗರಹಳ್ಳಿ ರಾಮಣ್ಣ ವೃತ್ತದಿಂದ ಗೌರಿಶಂಕರ ಕಲ್ಯಾಣಮಂಟಪದವರೆಗೆ ಫುಟ್ಪಾತ್ ಹಾಗೂ ಸೈಕಲ್ಬೇ ನಿರ್ಮಾಣ ಮಾಡಲು ₹6.50 ಕೋಟಿ ಅನುದಾನ ನೀಡಿದೆ. ಹೊಸಹಳ್ಳಿ ವೃತ್ತವನ್ನು ₹1.50 ಕೋಟಿ ವೆಚ್ಚದಲ್ಲಿ ವಿದೇಶ ಮಾದರಿ ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿದರು.

ಕೈಗಾರಿಕೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ನೂರು ಎಕರೆ ಜಮೀನು ನೀಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಮಂಡ್ಯ ಕ್ಷೇತ್ರದಲ್ಲಿ ಎರಡು, ನಾಗಮಂಗಲ ಹಾಗೂ ಶ್ರೀರಂಗಪಟ್ಟಣದಲ್ಲಿ ತಲಾ ಒಂದು ಜಾಗದ ಮಾಹಿತಿ ನೀಡಲಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ತಂಡ ಯಾವ ಜಾಗ ಸೂಕ್ತವೆಂದು ತಿಳಿಸಿದರೆ ಅದನ್ನು ಸಿದ್ಧಪಡಿಸಿ ಕೆಐಎಡಿಬಿ ಮೂಲಕ ಹಸ್ತಾಂತರಿಸಲಾಗುವುದು ಎಂದರು.

ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕಾಂಗ್ರೆಸ್ ಮಾಧ್ಯಮ ವಿಭಾಗದ ಜಿಲ್ಲಾ ಸಂಚಾಲಕ ಎಲ್.ಕೃಷ್ಣ, ಮುಖಂಡ ಸಿ.ತ್ಯಾಗರಾಜು ಇದ್ದರು.

ಕಾರ್ಖಾನೆ ಅಭಿವೃದ್ಧಿಗೆ ತಜ್ಞರ ತಂಡ ಸಲಹೆ

ಮೈಷುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಹೊಸ ಕಾರ್ಖಾನೆ ಮಾಡುವುದಾಗಿ ತೀರ್ಮಾನ ಮಾಡಲಾಗಿತ್ತು. ಆದರೆ ಅದಕ್ಕೆ ಸಾಕಷ್ಟು ನಿಯಮಗಳಿವೆ. ಅದರ ಬದಲು ಈಗಿನ ಕಾರ್ಖಾನೆಯನ್ನೇ ಅಭಿವೃದ್ಧಿಪಡಿಸಬಹುದೆಂದು ತಜ್ಞರ ತಂಡ ಸಲಹೆ ನೀಡಿದೆ. ಅದರಂತೆ ಬಾಯ್ಲರ್ ಹೌಸ್ ಮಾಡಲಾಗುತ್ತಿದೆ. ಇದರಿಂದ ಕಬ್ಬಿನ ಅರೆಯುವಿಕೆ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದು ಶಾಸಕ ಪಿ.ರವಿಕುಮಾರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.