ಮಳವಳ್ಳಿ: ಅಸುರಕ್ಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 40 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ ಸಂಬಂಧ ಗೋಕುಲ ವಿದ್ಯಾಸಂಸ್ಥೆಯ ಮೂರು ಶಾಲೆಗಳ ಮಾನ್ಯತೆ ರದ್ದುಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕದಲ್ಲಿ ಇದ್ದಾರೆ.

ತಾಲ್ಲೂಕಿನ ಟಿ.ಕಾಗೇಪುರ ಗೋಕುಲ ಪಬ್ಲಿಕ್ ಶಾಲೆ (ಆಂಗ್ಲ ಮಾಧ್ಯಮ), ಗೋಕುಲ ಹಿರಿಯ ಪ್ರಾಥಮಿಕ ಶಾಲೆ (ಕನ್ನಡ ಮಾಧ್ಯಮ) ಹಾಗೂ ಕಿರುಗಾವಲು ಗೋಕುಲ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆಯ ನಿಯಮ 38 ಮತ್ತು 39 ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದ್ದರಿಂದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಶಿವರಾಮೇಗೌಡ ಶಾಲೆಗಳ ಮ್ಯಾನತೆಯನ್ನು ಹಿಂಪಡೆದು ಆ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಪರ್ಯಾಯ ದಾಖಲಾತಿ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಿದ್ದಾರೆ.

2024-25ನೇ ಸಾಲಿನಲ್ಲಿ ಕಿರುಗಾವಲು ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 126, ಗೋಕುಲ ಹಿರಿಯ ಪ್ರಾಥಮಿಕ ಶಾಲೆ(ಕನ್ನಡ ಮಾಧ್ಯಮ)ಯಲ್ಲಿ 202 ಹಾಗೂ ಗೋಕುಲ ಪಬ್ಲಿಕ್ ಶಾಲೆ (ಆಂಗ್ಲ ಮಾಧ್ಯಮ)ಯಲ್ಲಿ 15 ವಿದ್ಯಾರ್ಥಿಗಳು ದಾಖಲಾಗಿದ್ದರು. ಅವರಲ್ಲಿ ಮೇಘಾಲಯ ಮೂಲದ 24ಕ್ಕೂ ಹೆಚ್ಚು ವಿದ್ಯಾರ್ಥಿ ಗಳಿಗೆ ವಸತಿ ಶಾಲೆಯ ಮಾದರಿಯಲ್ಲಿ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಅಕ್ರಮವಾಗಿ ವ್ಯಾಸಂಗ ಅವಕಾಶ ಕಲ್ಪಿಸಲಾಗಿತ್ತು ಎಂದು ತಿಳಿದು ಬಂದಿದೆ.

ಅಲ್ಲದೇ ಬೇರೆ ಶಾಲೆಯ ಹೆಸರಿನಲ್ಲಿ ಅನಧಿಕೃತವಾಗಿ ಎಸ್.ಎಸ್.ಎಲ್.ಸಿವರೆಗೆ ತರಗತಿ ನಡೆಸುತ್ತಿದ್ದರು ಎನ್ನಲಾಗಿದ್ದು, ಮಾರ್ಚ್ 16ರಂದು ಆ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೋಳಿ ಆಚರಣೆಯ ದಿವಸ ಹೋಟೆಲ್ನಿಂದ ಉದ್ಯಮಿಯೊಬ್ಬರು ತರಿಸಿಕೊಟ್ಟಿದ್ದ ಕಲುಷಿತ ಆಹಾರ ಸೇವಿಸಿ ಸ್ಥಳೀಯ ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡು ಮಾ.16ರಂದು ಮೇಘಾಲಯ ಮೂಲದ ವಿದ್ಯಾರ್ಥಿಗಳಾದ ಕೇರ್ಲಾಂಗ್ (13) ಹಾಗೂ ಮಾ.17ರಂದು ನಮೀಬ್ ಮಾಂತೆ (14) ಮೃತಪಟ್ಟಿದ್ದರು.

ಘಟನೆಯ ಬಳಿಕ ಶಾಲೆಗೆ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ, ಸದಸ್ಯ ವೆಂಕಟೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಜೇಂದ್ರ, ಡಿಡಿಪಿಐ ಎಚ್.ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಆಡಳಿತ ಮಂಡಳಿ ಮತ್ತು ಪೋಷಕರಿಂದ ಮಾಹಿತಿ ಸಂಗ್ರಹಿಸಿದ್ದರು.

ಶಿಕ್ಷಣ ಇಲಾಖೆಯ ನಿಮಯಗಳ ಉಲ್ಲಂಘನೆ ಕಂಡುಬಂದಿದ್ದರಿಂದ ಉತ್ತರ ನೀಡುವಂತೆ ಶಾಲೆ ಆಡಳಿತ ಮಂಡಳಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿತ್ತು. ಶಾಲೆಯು ನೀಡಿದ್ದ ಉತ್ತರ ಸಮರ್ಪಕವಾಗಿಲ್ಲದ ಕಾರಣ ಇಲಾಖೆ ಇಂಥಹ ಕ್ರಮಕ್ಕೆ ಮುಂದಾಗಿದೆ. ಇದೀಗ ಶಾಲೆಯಲ್ಲಿನ ಸುಮಾರು 300 ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಲ್ಲಿ ಆತಂಕ ಎದುರಾಗಿದೆ.

ಪ್ರಮುಖವಾಗಿ ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಆಂಗ್ಲ ಮಾಧ್ಯಮ ಪಾಠ ಮಾಡುತ್ತಿದ್ದು, ಅನಧಿಕೃತವಾಗಿ ಮಕ್ಕಳಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ ಅಸುರಕ್ಷಿತ ಆಹಾರ ಕೊಟ್ಟು ಇಬ್ಬರು ಮಕ್ಕಳ ಸಾವಿಗೆ ಕಾರಣವಾಗಿರು ವುದು, ನಿಷ್ಕಕಾಳಜಿ, ನಿಯಮಬಾಹಿರ, ಬೇಜವಾಬ್ದಾರಿತನದಿಂದ ಅನಾಹುತ ಸಂಭವಿಸಿದೆ. ಸೇರಿದಂತೆ ಹಲವು ಲೋಪಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 39ರ ಉಲ್ಲಂಘನೆಯಾಗಿದೆ. ಇದ್ದರಿಂದ ರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣ ಇಲಾಖೆ ಮುಜುಗರಕ್ಕೀ ಡಾಗಿದೆ ಎಂಬ ಅಂಶಗಳ ಆಧಾರದ ಮೇಲೆ ಶಿಕ್ಷಣ ಇಲಾಖೆ ಇಂಥ ಕಠಿಣ ನಿರ್ಧಾರ ತೆಗೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.