ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ|ನಾಲೆಗೆ ಉರುಳಿದ ಕಾರು: ನಾಲ್ವರು ಪಾರು

Published 4 ಜೂನ್ 2023, 15:44 IST
Last Updated 4 ಜೂನ್ 2023, 15:44 IST
ಅಕ್ಷರ ಗಾತ್ರ

ಮಂಡ್ಯ: ಕಾರೊಂದು ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸಹಿತ ನಾಲ್ವರೂ ಪ್ರಾಣಾಪಾಯದಿಂದ ಪಾರಾದಘಟನೆ ತಾಲ್ಲೂಕಿನ ಮಾಚಹಳ್ಳಿ ಬಳಿ ಭಾನುವಾರ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಉರುಳಿತು. ಈ ಸಂದರ್ಭದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 50 ಅಡಿಯಿಂದ ಕಾರು ಉರುಳಿದ್ದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ. ನಾಲೆಯಲ್ಲಿ ನೀರಿನ ಹರಿವು ಹೆಚ್ಚು ಇಲ್ಲದ ಕಾರಣ ನಾಲ್ವರೂ ಪಾರಾದರು.

ಪಾಂಡವಪುರದ ಸಂಪತ್‌ರಾಜ್‌ ಮತ್ತು ಪತ್ನಿ ಪ್ರತಿಭಾ ಹಾಗೂ ಇಬ್ಬರು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು. ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು, ಸ್ವಗ್ರಾಮಕ್ಕೆ ಹೋಗಿ ವಾಪಸ್‌ ತೆರಳುವಾಗ ಘಟನೆ ನಡೆದಿದೆ. ಶಿವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT