ಶನಿವಾರ, ಜೂನ್ 25, 2022
28 °C

ಮಂಡ್ಯ: ಹಳ್ಳಕ್ಕೆ ಉರುಳಿದ ಕಾರು, ಬೆಂಕಿ ತಗುಲಿ ಮೂವರ ಸಜೀವ ದಹನ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

PV Photo

ಮಂಡ್ಯ: ಮಳವಳ್ಳಿ ತಾಲ್ಲೂಕು ಹಲಗೂರು ಬಳಿ ಶುಕ್ರವಾರ ನಸುಕಿನಲ್ಲಿ ಹಳ್ಳಕ್ಕೆ ಉರುಳಿ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಾಲಕ ಸೇರಿ ಮೂವರು ಸಜೀವವಾಗಿ ದಹನಗೊಂಡಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶೇಖ್‌ ಫೈಸಲ್‌ (44), ಮೆಹಕ್ (33), ಶೇಖ್‌ ಆಯಿನ್‌ (11) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು ಚಾಮರಾಜನಗರದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು.

ಹಲಗೂರು ಪಟ್ಟಣ ದಾಟಿ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಹಳ್ಳಕ್ಕೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ಸಜೀವ ದಹನವಾಗಿದ್ದು ಸ್ಥಳೀಯರು ಇಬ್ಬರ ಪ್ರಾಣ ರಕ್ಷಣೆ ಮಾಡಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು