ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಿ.ಇ.ಟಿ - 2025ರ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಿ.ಇ.ಟಿ.ಯಲ್ಲಿ 6,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಿದ್ದು, ಮಂಡ್ಯ ತಾಲ್ಲೂಕಿನಲ್ಲಿ 12 ಹಾಗೂ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನ ಪತ್ರಿಕೆಯನ್ನು ಕೊಂಡೊಯ್ಯಲು ತಹಶೀಲ್ದಾರ್ ಬಿ.ಇ.ಒ ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಗೊಳಿಸಿ ನಿಷೇಧಾಜ್ಞೆ ಹೊರಡಿಸಲಾಗುವುದು. ಯಾವುದೇ ಖಾಸಗಿ ವ್ಯಕ್ತಿಗಳು 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸುವಂತಿಲ್ಲ ಹಾಗೂ ಸುತ್ತಮುತ್ತ ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆಯುವಂತಿಲ್ಲ ಎಂದು ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳು, ಕೊಠಡಿಯಲ್ಲಿ ಗಡಿಯಾರ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ಕೊಠಡಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

24 ವಿದ್ಯಾರ್ಥಿಗಳಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗುವುದು. ವಿದ್ಯುತ್ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಾಗದಂತೆ ಭದ್ರತೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಪರೀಕ್ಷೆಗಳು ಮುಗಿದ ನಂತರ ಯಾವುದೇ ವಿಳಂಬ ಮಾಡದೆ, ಎಲ್ಲಾ ಉತ್ತರ ಪತ್ರಿಕೆಗಳನ್ನು ಜಿಲ್ಲಾ ಖಜಾನೆಗೆ ಮಾರ್ಗಾಧಿಕಾರಿಗಳು ತಲುಪಿಸಬೇಕು ಎಂದರು.

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಚೆಲುವಯ್ಯ, ಮಂಡ್ಯ ಪಶ್ಚಿಮ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಎನ್. ಕೇಶವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1 (ಆಡಳಿತ) ಎಂ.ಬಾಬು, ಜಿಲ್ಲಾ ಖಜಾನೆಯ ಮುಖ್ಯ ಲೆಕ್ಕಿಗ ಬಿ.ಜೆ. ಬಸವಣ್ಣ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

24 ವಿದ್ಯಾರ್ಥಿಗಳಿಗೆ ಒಬ್ಬ ಮೇಲ್ವಿಚಾರಕ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ನಿಯೋಜನೆ ಉತ್ತರ ಪತ್ರಿಕೆಗಳು ಜಿಲ್ಲಾ ಖಜಾನೆಗೆ ರವಾನೆ

‘15 ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ’

ಸಿ.ಇ.ಟಿ ನಡೆಯುವ 15 ಕೇಂದ್ರಗಳಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಕಡ್ಡಾಯ. ಎಲ್ಲಾ ಕೊಠಡಿಯ ವಿಡಿಯೊಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರದರ್ಶನ ಗೊಳ್ಳುತ್ತಿರುತ್ತವೆ. ಆದ್ದರಿಂದ ಕೊಠಡಿ ಮೇಲ್ವಿಚಾರಕರು ಜಾಗೃತೆಯಿಂದ ಕಾರ್ಯನಿರ್ವಹಿಸಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಎಚ್ಚರಿಕೆ ನೀಡಿದರು. ಪರೀಕ್ಷಾರ್ಥಿಗಳು ರಿಸ್ಟ್ ವಾಚ್ ಕ್ಯಾಲ್ಕುಲೇಟರ್ ಮೊಬೈಲ್ ಹಾಗೂ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ. ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ಬಿಡುವ ಮೊದಲು ಅವರ ಪ್ರವೇಶ ಪತ್ರವನ್ನು ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಗುರುತು ಖಾತರಿಯಾದ ನಂತರ ಪ್ರವೇಶ ನೀಡತಕ್ಕದ್ದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.