ಮಂಡ್ಯ: ಪತ್ನಿಗೆ ಶ್ರೀಮಂತ ಎಂದು ತೋರಿಸಿಕೊಳ್ಳಲು ಸರಗಳ್ಳತನ ನಡೆಸುತ್ತಿದ್ದ ಚಾಲಕ ಸೇರಿ ನಾಲ್ವರನ್ನು ಬಂಧಿಸಿರುವ ಕಿರುಗಾವಲು ಠಾಣೆ ಪೊಲೀಸರು, ಆರೋಪಿಗಳಿಂದ 475.5 ಗ್ರಾಂ ತೂಕದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ ಮಾತನಾಡಿ, ಆರೋಪಿಗಳಿಂದ ಒಟ್ಟು ₹70.37 ಲಕ್ಷ ಮೌಲ್ಯದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ವಿವಿಧ ಠಾಣೆಗಳಿಗೆ ಸಂಬಂಧಿಸಿ 16 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಮಾಹಿತಿ ನೀಡಿದರು.

ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದವರಾದ ಚಾಲಕ ಗುರುಪ್ರಸಾದ್ (36), ಬಾರ್ ಸಪ್ಲೈಯರ್ ನಂಜೇಗೌಡ ಟಿ.ಎನ್. (19), ರೋಹಿತ್ ಟಿ.ಪಿ. (20) ಹಾಗೂ ಆಲಭುಜನಹಳ್ಳಿಯ ಮಾದೇಶ ಎಸ್. (20) ಬಂಧಿತರು.

ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದ ಚಾಲಕ ಗುರುಪ್ರಸಾದ್ ಟಿ.ಎಚ್. ಸರಗಳ್ಳತನ ತಂಡದ ಪ್ರಮುಖನಾಗಿದ್ದು, ಈತ ತಾನು ಸಿರಿವಂತ ಎಂದು ಬಿಂಬಿಸಿಕೊಳ್ಳಲು 2024ರವರೆಗೆ ಸರಗಳ್ಳತನ ಮಾಡುತ್ತಿದ್ದ. 2024ರಲ್ಲಿ ಪತ್ನಿ ಈತನೊಂದಿಗೆ ಜಗಳ ಮಾಡಿಕೊಂಡು ತವರು ಸೇರಿದ್ದಳು. ಅಂದಿನಿಂದ ಕಳ್ಳತನ ಮಾಡುವುದನ್ನು ನಿಲ್ಲಿಸಿದ್ದ ಎಂದರು.

ನಂತರ 2025ರಲ್ಲಿ ಆತನ ಪತ್ನಿಯ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ. ಜೈಲಿನಿಂದ ಬಿಡುಗಡೆಯಾದ ನಂತರವೂ ಇತರರೊಂದಿಗೆ ಸೇರಿ ಅಪರಾಧ ಕೃತ್ಯ ಎಸಗುತ್ತಿದ್ದ ಎಂದು ತಿಳಿಸಿದರು.

ಎಫ್ಐಆರ್ ದಾಖಲು: ಅಣಸಾಲೆ ಗ್ರಾಮದ ಪುಟ್ಟಮ್ಮ ಕೋಂ ಮಾದಯ್ಯ ಎಂಬುವವರು ಚಿಕ್ಕಮುಲಗೂಡು–ರಾಮನಾಥ ಮೋಳೆ ರಸ್ತೆಯಲ್ಲಿ ಮಾರ್ಚ್ 30ರಂದು ಮಧ್ಯಾಹ್ನ 12.30ರಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 27 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದರು. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು.

ತಂಡ ರಚನೆ: ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್. ಶ್ರೀಧರ್ ನೇತೃತ್ವದಲ್ಲಿ ಪಿಎಸ್ಐ ರವಿಕುಮಾರ್ ಡಿ., ಪ್ರಕಾಶ್ ಬಿ.ವಿ. ಮತ್ತು ಇತರ ಸಿಬ್ಬಂದಿಯ ತಂಡ ರಚಿಸಲಾಗಿತ್ತು. ಆರೋಪಿಗಳನ್ನು ಪತ್ತೆ ಮಾಡಿ, ವಿಚಾರಣೆ ನಡೆಸಿದಾಗ ಅಪರಾಧ ಕೃತ್ಯಗಳ ಬಗ್ಗೆ ಬಾಯಿ ಬಿಟ್ಟಿದ್ದಾರೆ.

ಬಸರಾಳು, ಕೆರೆಗೋಡು, ಮಳವಳ್ಳಿ ಗ್ರಾಮಾಂತರ, ಅರಕೆರೆ, ಕೊಪ್ಪ, ಮಂಡ್ಯ ಗ್ರಾಮಾಂತರ, ಶ್ರೀರಂಗಪಟ್ಟಣ, ಬನ್ನೂರು ಮತ್ತು ಕಿರುಗಾವಲು ಪೊಲೀಸ್ ಠಾಣೆಗಳಲ್ಲಿ 2022ರಲ್ಲಿ 2 ಪ್ರಕರಣ, 2023ರಲ್ಲಿ 8 ಪ್ರಕರಣ, 2024ರಲ್ಲಿ 2 ಪ್ರಕರಣ ಹಾಗೂ ಪ್ರಸಕ್ತ ವರ್ಷ 4 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-1419661437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.