ಮದ್ದೂರು: ಕೇಂದ್ರ ಸಚಿವನಾದ 5 ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅಂಕಿತ ಹಾಕಿಸುತ್ತೇನೆ ಎಂದು ಬರೀ ಸುಳ್ಳು ಹೇಳಿಕೊಂಡು ಜನರಿಗೆ ಮಂಕು ಬೂದಿ ಎರಚುವವರನ್ನು ನಂಬುವ ಜನ ಇನ್ಣೂ ಇದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ದ ಟೀಕಾಪ್ರಹಾರ ನಡೆಸಿದರು.

ನಗರದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ₹10 ಸಾವಿರ ಕೋಟಿ ನೀಡಿರುವ ಲೆಕ್ಕವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೇಳಿದ್ದಾರೆ. ನಾವು ಲೆಕ್ಕ ಕೊಡಲು ಸಿದ್ಧ, ಆದರೆ ಹಲವು ವರ್ಷಗಳಿಂದ ಜಿಲ್ಲೆಗೆ ಏನೂ ಮಾಡದೇ ಕೇವಲ ಖಾಲಿ ಡಬ್ಬವನ್ನು ಹಿಡಿದು ಓಡಾಡಿಕೊಂಡು ಜಿಲ್ಲೆಗೆ ಏನೋ ಅನುದಾನ ನೀಡಿದ್ದೇವೆ ಎಂದು ಅವರು ಹೇಳುತ್ತಿದ್ದಾರೆ. ನಾವು ಹುಡುಕಿದರೂ ಆ ಲೆಕ್ಕ ಸಿಗುತ್ತಿಲ್ಲ ಎಂದರು.

ನಾನು ಸಚಿವನಾದ ನಂತರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ, ಮೈಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ರಾಜ್ಯ ಸರ್ಕಾರವು ಹೆಚ್ಚಿನ ಅನುದಾನವನ್ನು ನೀಡಿದೆ ಅಷ್ಟೇ ಅಲ್ಲದೇ, ಕೃಷಿ ವಿಶ್ವವಿದ್ಯಾಲಯವನ್ನು ಮಂಡ್ಯಕ್ಕೆ ತಂದ ಕೀರ್ತಿ ಕಾಂಗ್ರೆಸ್ ಗೆ ಸಲ್ಲುತ್ತದೆ, ಈ ಭೂಮಿ ಇರುವವರೆಗೂ ಕೃಷಿ ವಿಶ್ವವಿದ್ಯಾಲಯ ಇರುತ್ತದೆ ಎಂದರು.

ಕಾಂಗ್ರೆಸ್ ಕೇಂದ್ರ ನಾಯಕರಾದ ರಾಹುಲ್ ಗಾಂಧಿಯವರು ಜನರ ಕಷ್ಟ ಸುಖ ತಿಳಿಯಲು ದೇಶದ ಉದ್ದಗಲಕ್ಕೂ ಪಾದಯಾತ್ರೆಯನ್ನು ನಡೆಸಿದ್ದನ್ನು ದೇಶದ ಜನತೆ ಮರೆಯುವುದಿಲ್ಲವೆಂದ ಅವರು, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸ ಹಾಗೂ ಹಿರಿಮೆಯಿದೆ ಎಂದರು.

ಶಾಸಕ ಕೆ.ಎಂ. ಉದಯ್ ಮಾತನಾಡಿ, ಇತ್ತೀಚೆಗೆ ನಡೆದ ಮನ್ಮುಲ್, ಡಿಸಿಸಿ ಬ್ಯಾಂಕ್ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಅಧಿಕಾರ ಹಿಡಿದಿದ್ದಾರೆ. ಅಷ್ಟೇ ಅಲ್ಲದೇ ಮುಂದೆ ಬರುವ ಗ್ರಾಮ ಪಂಚಾಯತಿ, ಜಿ.ಪಂ ಸೇರಿದಂತೆ ನಗರಸಭಾ ಚುನಾವಣೆಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮವಹಿಸಿ ಪಕ್ಷದ ಬಲವರ್ಧನೆಗೆ ಗಮನ ಹರಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ ಗಂಗಾಧರ್, ತಾಲ್ಲೂಕು ಘಟಕದ ಅಧ್ಯಕ್ಷ ಚಲುವರಾಜು, ಭಾರತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಪುರಸಭೆ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮೋಹನ್ ಕುಮಾರ್,ಮುಖಂಡರಾದ ಐಶ್ವರ್ಯ ಡೆವಲಪರ್ಸ್ನ ಸತೀಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-40-2083818948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.