ಮಂಡ್ಯ: ‘ಜಿಲ್ಲೆಯ ಹೆಮ್ಮೆಯ ನಾಯಕ ಚಲುವರಾಯಸ್ವಾಮಿ ಅವರಿಗೆ ಮೊದಲ ಹಂತದಲ್ಲಿ ಮಂತ್ರಿ ಸ್ಥಾನವನ್ನು ಕೊಡದೆ ಅಪಮಾನ ಮಾಡಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಜಿ.ಬಿ.ನವೀನ್ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ನಮ್ಮ ನಾಯಕರಿಗೆ ಉಪ ಮುಖ್ಯಮಂತ್ರಿ ಕೊಡುವ ಭರವಸೆ ಇತ್ತು. ಆದರೆ ಒಂದೇ ಸಮುದಾಯಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕೊಡುವುದಿಲ್ಲ ಎಂದಾದಾಗ ಮಂತ್ರಿ ಸ್ಥಾನವನ್ನು ಮೊದಲ ಹಂತದಲ್ಲಿ ಪ್ರಕಟಿಸಬೇಕಿತ್ತು. ಇದು ಮಂಡ್ಯ ಜಿಲ್ಲೆಗೆ ಮತ್ತು ಸಮುದಾಯಕ್ಕೆ, ಮಾಡಿದ ಅಪಮಾನವಾಗಿದೆ. ಜಿಲ್ಲೆಯ ಪಕ್ಷದ ಕಾರ್ಯಕರ್ತರಿಗೂ ಬೇಸರ ತರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-1105311924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.