ಮಂಡ್ಯ: ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ 1354 ‘ಬಾಲ ಗರ್ಭಿಣಿ’ (ಅಪ್ರಾಪ್ತ ವಯಸ್ಸಿನಲ್ಲೇ ಗರ್ಭ ಧರಿಸುವುದು) ಪ್ರಕರಣಗಳು ವರದಿಯಾಗಿವೆ. ಮಕ್ಕಳಿಗೆ ಸುರಕ್ಷಿತ ವಾತಾವರಣವಿಲ್ಲ ಎಂಬುದಕ್ಕೆ ಈ ಪ್ರಕರಣಗಳು ಸಾಕ್ಷಿಯಾಗಿವೆ.

ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ ಸೆಂಟರ್ಗಳಲ್ಲಿ ನಿಯಮಬಾಹಿರವಾಗಿ 31 ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿದ ಪ್ರಕರಣಗಳು ಲೋಕಾಯುಕ್ತ ತನಿಖೆಯಿಂದ ಈಚೆಗೆ ಬೆಳಕಿಗೆ ಬಂದಿವೆ. ಇದರ ಬೆನ್ನಲ್ಲೇ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳ ಕಾರ್ಯವೈಖರಿ ಬಗ್ಗೆ ಜನರಿಂದ ಹಲವು ಅನುಮಾನಗಳು ವ್ಯಕ್ತವಾಗಿವೆ.

‘ಬಾಲ್ಯವಿವಾಹ, ಲೈಂಗಿಕ ಕಿರುಕುಳ ಹಾಗೂ ಪ್ರೀತಿಯ ನೆಪದಲ್ಲಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕೃತ್ಯಗಳಿಂದ ‘ಬಾಲ ಗರ್ಭಿಣಿ’ ಪ್ರಕರಣಗಳು ಹೆಚ್ಚಾಗುತ್ತಿವೆ. ಅಪರಿಚಿತರಿಂದ ಮಾತ್ರವಲ್ಲ, ಮನೆಯ ಸುತ್ತಮುತ್ತಲಿನ ಪರಿಚಿತ ವ್ಯಕ್ತಿಗಳಿಂದಲೇ ಮಕ್ಕಳ ಮೇಲೆ ಲೈಂಗಿಕ ಕಿರುಕುಳಗಳು ನಡೆಯುತ್ತಿವೆ. ಬಾಲಕಿಯರು ಗರ್ಭಿಣಿಯರಾದ ಪ್ರಕರಣಗಳಲ್ಲಿ 14ರಿಂದ 18 ವರ್ಷದೊಳಗಿನವರ ಸಂಖ್ಯೆಯೇ ಹೆಚ್ಚು’ ಎನ್ನುತ್ತಾರೆ ಪೊಲೀಸರು.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಬಾಲ ಗರ್ಭಿಣಿಯರ ಪ್ರಕರಣಗಳು ಇಳಿಕೆಯಾಗಿವೆ ಎಂದು ‘ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ’ (ಆರ್ಸಿಎಚ್) ಪೋರ್ಟಲ್ ಅಂಕಿಅಂಶಗಳು ತಿಳಿಸುತ್ತವೆ. ಆದರೆ, ಖಾಸಗಿ ಸೆಂಟರ್ಗಳಲ್ಲಿ ನಿಯಮಬಾಹಿರವಾಗಿ ಸ್ಕ್ಯಾನಿಂಗ್ ಮಾಡಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದ ಕಾರಣ ಎಲ್ಲ ಪ್ರಕರಣಗಳು ದಾಖಲಾಗುತ್ತಿಲ್ಲ. ಅಷ್ಟೇ ಅಲ್ಲ, ಕೆಲವು ಪೋಷಕರು ಬಾಲ್ಯ ವಿವಾಹವನ್ನು ಕದ್ದುಮುಚ್ಚಿ ಮಾಡು ತ್ತಿರುವ ಕಾರಣ ಪ್ರಕರಣಗಳು ಬೆಳಕಿಗೆ ಬರುತ್ತಿಲ್ಲ.

ಸಮನ್ವಯತೆ ಕೊರತೆ: ‘ಪೊಲೀಸ್, ಶಿಕ್ಷಣ, ಆರೋಗ್ಯ, ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡುವೆ ಸಮನ್ವಯತೆ ಇಲ್ಲದ ಕಾರಣ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳನ್ನು ತಡೆಗಟ್ಟುವುದು ಸಾಧ್ಯವಾಗುತ್ತಿಲ್ಲ. ಮಕ್ಕಳ ಸಹಾಯವಾಣಿ ಅಥವಾ ಬೇರೆ ಮೂಲಗಳಿಂದ ಮಾಹಿತಿ ಸಿಕ್ಕ ತಕ್ಷಣ ‘ಎಫ್ಐಆರ್’ ಆಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕು’ ಎಂದು ಮಕ್ಕಳ ಕಲ್ಯಾಣ ಸಮಿತಿ ಮಾಜಿ ಸದಸ್ಯ ಕೆ.ಎಂ.ಮಹೇಶ್ ಒತ್ತಾಯಿಸಿದ್ದಾರೆ.

ದಾಖಲಾಗದ ಪ್ರಕರಣಗಳು

ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ 674 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಆದರೆ, 1,354 ಬಾಲ ಗರ್ಭಿಣಿಯರ ಪ್ರಕರಣಗಳು ವರದಿಯಾಗಿವೆ. ಅಂದರೆ, ಎಲ್ಲ ಬಾಲ ಗರ್ಭಿಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ‘ಪೋಕ್ಸೊ’ ಕಾಯ್ದೆಯಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿಲ್ಲ.

‘ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಮಾಹಿತಿ ಆಧರಿಸಿ, ಬಾಲ ಗರ್ಭಿಣಿ ಪ್ರಕರಣಗಳನ್ನು ಆರ್ಸಿಎಚ್ ಪೋರ್ಟಲ್ನಲ್ಲಿ ನಮೂದಿಸಲಾಗುತ್ತದೆ. ಆದರೆ, ಈ ಬಗ್ಗೆ ಪೊಲೀಸರಿಗೆ ಯಾರು ದೂರು ಕೊಡಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದ ಕಾರಣ 2023ಕ್ಕೂ ಮುನ್ನ ‘ಎಫ್ಐಆರ್’ ದಾಖಲಾಗಿಲ್ಲ. ಇತ್ತೀಚಿನ ವರ್ಷಗಳಲ್ಲಿ ಮಾಹಿತಿ ಸಿಕ್ಕ ತಕ್ಷಣ ಎಫ್ಐಆರ್ ದಾಖಲು ಮಾಡಲಾಗುತ್ತಿದೆ’ ಎನ್ನುತ್ತವೆ ಇಲಾಖೆ ಮೂಲಗಳು.

ಬಾಲಕರ ಮೇಲೂ ಲೈಂಗಿಕ ದೌರ್ಜನ್ಯ!

ಮಂಡ್ಯ ಜಿಲ್ಲೆಯಲ್ಲಿ ಕಳೆದ 6 ವರ್ಷಗಳಲ್ಲಿ 771 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿವೆ. ಅಷ್ಟೇ ಅಲ್ಲ, ಐವರು ಬಾಲಕರು ಕೂಡ ಲೈಂಗಿಕ ಕಿರುಕುಳಕ್ಕೆ ತುತ್ತಾಗಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ.

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪೋಕ್ಸೊ, ಬಾಲ್ಯವಿವಾಹ, ಬಾಲಕಾರ್ಮಿಕ, ಜೀತಪದ್ಧತಿ, ಜೆ.ಜೆ.ಕಾಯ್ದೆ ಮತ್ತು ಬಿಎನ್ಎಸ್ಎಸ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎನ್ನುತ್ತಾರೆ ಪೊಲೀಸರು.

ಶಾಲೆಗಳಲ್ಲಿ ‘ಮಕ್ಕಳ ಮನದೊಳಗೆ ಸುರಕ್ಷಿತ ಅಭಿಯಾನ’ ನಡೆಸಿದ್ದೇವೆ. ಬೇಸಿಗೆ ಶಿಬಿರಗಳಲ್ಲೂ ‘ಪೋಕ್ಸೊ’ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲಿದ್ದೇವೆ
ಎಸ್. ರಶ್ಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಮಂಡ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.