ಮದ್ದೂರು: ನಗರಸಭೆಗೆ ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಸೋಮನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಳೆದ ತಿಂಗಳು ತಾಲ್ಲೂಕಿನ ಗೆಜ್ಜಲಗೆರೆ ಗ್ರಾ.ಪಂ. ಮುಂದೆ ಗ್ರಾಮಸ್ಥರು ಹಾಗೂ ಮುಖಂಡರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಕೂಡಲೇ ಪತ್ರ ಬರೆಯುವುದಾಗಿ ತಿಳಿಸಿದ್ದರು. ಪ್ರತಿಭಟನೆ ವಿಷಯದಲ್ಲಿ ಯಶಸ್ಸು ಸಿಗುವವರೆಗೆ ಗ್ರಾಮಸ್ಥರ ಜೊತೆಗೆ ಇರುತ್ತೇವೆ ಎಂದಿದ್ದರು. ಅದರಂತೆ ಫೆ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಈ ರೀತಿ ಪ್ರತಿಕ್ರಿಯಿಸಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ನಗರಸಭೆಗೆ ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರಕ್ಕೆ 89 ದಿನಕ್ಕೆ ದಾಪುಗಾಲಿಟ್ಟಿದ್ದು ಕೆ.ಆರ್.ಪೇಟೆ ಶಾಸಕ ಮಂಜು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-40-605525889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.