ಮಂಡ್ಯ: ಅಡುಗೆ ಅನಿಲ ಸಿಲಿಂಡರ್ ₹60 ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹114.50ಕ್ಕೆ ಹೆಚ್ಚಳವಾಗಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಘಟಕದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ಎಂ.ವಿ.ಪ್ರತಿಮೆ ಜಮಾವಣೆಗೊಂಡು ಕಾರ್ಯಕರ್ತರು ‘ತೊಲಗಲಿ ತೊಲಗಲಿ ಕೇಂದ್ರ ಬಿಜೆಪಿ ಸರ್ಕಾರ ತೊಲಗಲಿ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಮಧ್ಯಮ ವರ್ಗದವರಿಗೆ ಬೆಲೆ ಹೆಚ್ಚಳದ ಬರೆ ಹಾಕುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿ ಬೆಲೆ ಹೆಚ್ಚಳ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಕೇವಲ ₹400 ಇದ್ದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ₹1,100ಕ್ಕೆ ಹೆಚ್ಚಳ ಮಾಡಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಜನರ ವಿರೋಧಕ್ಕೆ ಬೆದರಿದ ಕೇಂದ್ರ ಸರ್ಕಾರವು ಸಿಲಿಂಡರ್ ಬೆಲೆಯಲ್ಲಿ ₹200 ಕಡಿಮೆ ಮಾಡುವ ನಾಟಕವಾಡಿತ್ತು. ಆದರೆ, ಈಗ ಮತ್ತೆ ವಿನಾಕಾರಣ ಒಮ್ಮೆಲೇ ₹60 ಹೆಚ್ಚಿಸಿ ಬಡಜನತೆಯ ಮೇಲೆ ಅನ್ಯಾಯದ ಆರ್ಥಿಕ ಹೊರೆ ಹೇರಿದೆ’ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿ, ‘ಬೆಲೆ ಹೆಚ್ಚಳ ಖಂಡಿಸಿ ಜನಸಾಮಾನ್ಯರ ಪರವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ದೇಶದ ಉದ್ದಗಲದಲ್ಲಿಯೂ ವ್ಯಾಪಕವಾಗಿ ಖಂಡಿಸಲಾಗುತ್ತಿದೆ. ಇನ್ನಾದರೂ ಸಿಲಿಂಡರ್ ಬಲೆ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಮಾತನಾಡಿ, ‘ಕೇಂದ್ರ ಸರ್ಕಾವು ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೆ ಬಡವರು ಮತ್ತು ಮಧ್ಯಮ ವರ್ಗದವರು ಜೀವನ ಮಾಡುವುದು ಹೇಗೆ’ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ಮುಖಂಡರಾದ ತಗ್ಗಹಳ್ಳಿ ಯಶೋಧಾ, ಶಶಿಕಲಾ, ಶಕುಂತಲಾ, ಅನುರಾಧಾ, ಗುಣಲಕ್ಷ್ಮಿ, ಜಯಲಕ್ಷ್ಮಿ, ಕಮಲಾರಾಜ್, ಪದ್ಮಾ, ಮಮತಾ, ಸುಂಡಹಳ್ಳಿ ಮಂಜುನಾಥ, ಅಜ್ಜಹಳ್ಳಿ ರಾಮಕೃಷ್ಣ, ಚನ್ನಪ್ಪ, ಚಿನಕುರಳಿ ರಮೇಶ್, ಎಲ್.ಕೃಷ್ಣ, ಹನ್ಸಿಯಬಾನ್, ಕೃಷ್ಣೆಗೌಡ, ಅಭಿಲಾಷ್, ನಾಗಮಣಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರ ತೊಲಗಲಿ ಘೋಷಣೆ ಅಡುಗೆ ಅನಿಲ ₹60, ವಾಣಿಜ್ಯ ಸಿಲಿಂಡರ್ ₹114.50ಕ್ಕೆ ಹೆಚ್ಚಳ ದೇಶದ ವಿವಿಧೆಡೆ ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.