ಮಂಡ್ಯ: ಇಲ್ಲಿಯ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಂ.ಡಿ.ಸಿ.ಸಿ) ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 8 ಮಂದಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 12 ಸ್ಥಾನಗಳ ಪೈಕಿ 8 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಪಾರಮ್ಯ ಸಾಧಿಸಿರುವ ಕಾರಣ, ಬ್ಯಾಂಕಿನ ಅಧಿಕಾರ ಗದ್ದುಗೆ ಕಾಂಗ್ರೆಸ್ ತೆಕ್ಕೆಗೆ ಸೇರುವುದು ಬಹುತೇಕ ಖಚಿತವಾಗಿದೆ.

ಒಟ್ಟು 43 ಅಭ್ಯರ್ಥಿಗಳಿಂದ 58 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ತೀವ್ರ ಕುತೂಹಲ ಮೂಡಿಸಿದ್ದ ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮತ್ತು ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ಸಿ.ಸಚ್ಚಿನ್ (ಸಚಿವ ಎನ್. ಚಲುವರಾಯಸ್ವಾಮಿ ಅವರ ಪುತ್ರ) ಅವಿರೋಧವಾಗಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ.

ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿ.ಎ.ಪಿ.ಸಿ.ಎಂ.ಎಸ್)ಗಳ ಕ್ಷೇತ್ರದಿಂದ ಕೆ.ವಿ. ದಿನೇಶ್, ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು (ನೇಕಾರರ ಸಹಕಾರ ಸಂಘಗಳು ಸೇರಿದಂತೆ) ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು (ಫಾರ್ಮಿಂಗ್ ಸಹಕಾರ ಸಂಘಗಳು ಸೇರಿದಂತೆ) ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಕೆ.ಸಿ. ಜೋಗಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲೆಯಲ್ಲಿನ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳು ಮತ್ತು ನಗರ ಸಹಕಾರಿ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್. ಅಶೋಕ್ ಹಾಗೂ ಮದ್ದೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ, ಶ್ರೀರಂಗಪಟ್ಟಣ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.2ರಂದು ಮತದಾನ:

ನ.2ರಂದು (ಭಾನುವಾರ) ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಬೆಂಗಳೂರು–ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಮೈಷುಗರ್ ಪ್ರೌಢಶಾಲೆಯಲ್ಲಿ ಮತದಾನ ನಡೆಯಲಿದೆ.

ಮತದಾನ ಮುಕ್ತಾಯವಾದ ನಂತರ ಅಂದೇ ಮತ ಎಣಿಕೆ ಕಾರ್ಯ ನಡೆಯಲಿದೆ. ಆನಂತರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿ ಎಂ.ಶಿವಮೂರ್ತಿ ತಿಳಿಸಿದ್ದಾರೆ.

- ಮಂಡ್ಯದ ಎಂಡಿಸಿಸಿ ಚುನಾವಣೆ ಇತಿಹಾಸದಲ್ಲಿ ಈ ಬಾರಿ ಅತಿ ಹೆಚ್ಚು ಅವಿರೋಧ ಆಯ್ಕೆಗಳಾಗಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೊಸ ದಾಖಲೆ ಬರೆದಿದ್ದಾರೆ. ಸಚಿವ ಮತ್ತು ಶಾಸಕರ ಹೋರಾಟ ಫಲನೀಡಿದೆ
ಸಿ.ಡಿ.ಗಂಗಾಧರ್ ಅಧ್ಯಕ್ಷ ಮೈಷುಗರ್

ಅಧಿಕಾರ ಹಿಡಿಯುವುದು ಖಚಿತ: ರವಿಕುಮಾರ್

ಎಂಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರನ್ನು ಶಾಸಕ ಪಿ.ರವಿಕುಮಾರ್ ಅವರು ಸೋಮವಾರ ನಗರದಲ್ಲಿ ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು ‘12 ಸ್ಥಾನದ ಪೈಕಿ ಎಂಟು ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಸದ್ಯಕ್ಕೆ ಪ್ರಕರಣ ಕೋರ್ಟ್ನಲ್ಲಿ ಇರುವುದರಿಂದ ತೀರ್ಪು ಬಂದ ನಂತರ ಘೋಷಣೆಯಾಗಬಹುದು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಮಾರ್ಗದರ್ಶನದಲ್ಲಿ ಎಂಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮುನ್ನಡೆ ಗಳಿಸಿದ್ದೇವೆ. ಈ ಬಾರಿಯೂ ಅಧಿಕಾರ ಹಿಡಿಯುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮನ್ಮುಲ್ ಅಧ್ಯಕ್ಷ ಯು.ಸಿ. ಶಿವಕುಮಾರ್ ಮುಡಾ ಅಧ್ಯಕ್ಷ ನಹೀಂ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜೋಗಿಗೌಡ ಎಚ್.ಅಶೋಕ್ ಇದ್ದರು.

4 ಕ್ಷೇತ್ರಗಳಿಗೆ ಚುನಾವಣೆ

ಮಂಡ್ಯ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಸಾತನೂರು ಗ್ರಾಮದ ಸತೀಶ್ ಮತ್ತು ಹಳೇಬೂದನೂರು ಗ್ರಾಮದ ಸ್ವಾಮಿ ಕಣದಲ್ಲಿದ್ದಾರೆ. ಪಾಂಡವಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಅರಳಕುಪ್ಪೆ ಗ್ರಾಮದ ಅಶೋಕ ಎ.ಆರ್. ಮತ್ತು ಹೊಸಕೋಟೆ ಗ್ರಾಮದ ಎಚ್.ಸಿ.ಪುಟ್ಟಸ್ವಾಮಿಗೌಡ ನಡುವೆ ಚುನಾವಣೆ ನಡೆಯಲಿದೆ. ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಶೀಳನೆರೆ ಗ್ರಾಮದ ಎಸ್.ಎಸ್.ಅಂಬರೀಷ್ ಮತ್ತು ಸಿಂಗನಹಳ್ಳಿ ಗ್ರಾಮದ ಧರಣೇಶ್ಕುಮಾರ್ ಪಿ. ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಲ್ಲಿ ತೈಲೂರು ಗ್ರಾಮದ ಸಿ.ಚಲುವರಾಜು ಮತ್ತು ವಡ್ಡರಹಳ್ಳಿ ಗ್ರಾಮದ ವಿಶ್ವನಾಥ್ ವಿ.ಎಂ. ನಡುವೆ ನ.2ರಂದು ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.