ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣಿಗೆ ಶರಣಾಗಿದ್ದಾರೆ.

ತಾಲ್ಲೂಕಿನ ಹೊಸಕೋಟೆ ಗ್ರಾಮದ ಗಣೇಶಗೌಡ ಮತ್ತು ಮಂಜುಳಾ ದಂಪತಿಯ ಪುತ್ರ ದರ್ಶನ್ (29) ಹಾಗೂ ದಿವ್ಯಶ್ರೀ (25) ನೇಣಿಗೆ ಶರಣಾದ ದಂಪತಿ. ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ಯತ್ನಿಸಿದ್ದು, ಎರಡು ವರ್ಷದ ಹೆಣ್ಣು ಮಗು ಪ್ರಾಣಾಪಾಯದಿಂದ ಪಾರಾಗಿದೆ.

ನಾಟನಹಳ್ಳಿಯ ಲಕ್ಷ್ಮಣಗೌಡ ಮತ್ತು ಸುನಂದಾ ದಂಪತಿಯ ಮಗಳಾದ ದಿವ್ಯಶ್ರೀ ಅವರನ್ನು ಮೂರು ವರ್ಷಗಳ ಹಿಂದೆ ದರ್ಶನ್ ಅವರೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು.

ಮೃತ ದರ್ಶನ್ ತಂದೆ ಗಣೇಶಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಆರ್.ಪೇಟೆ ಟೌನ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.