ಮಂಡ್ಯ: ‘ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು. ತೆರವುಗೊಳಿಸಿದ ಕೆರೆಗಳ ಜಾಗವನ್ನು ಮತ್ತೆ ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡಬೇಕು. ಕೆರೆ ಒತ್ತುವರಿ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.

ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದುವರೆಗೆ ಸುಮಾರು 245 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಇನ್ನು 203 ಕೆರೆಗಳ ತೆರವು ಬಾಕಿ ಉಳಿದಿದೆ. ಬಾಕಿ ಇರುವ ಕೆರೆ ಒತ್ತುವರಿಗಳನ್ನು ತಕ್ಷಣವೇ ತೆರವುಗೊಳಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಎಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು. ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಧಿಕಾರಿ ಶ್ರೀನಿವಾಸ್, ಡಿಡಿಎಲ್ಆರ್ ವಿರೂಪಾಕ್ಷ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

‘ಒತ್ತುವರಿ ತೆರವಿಗೆ ಮಾರ್ಚ್ 30ರ ಗಡುವು’

‘ಪ್ರತಿ ತಿಂಗಳು ಕೆರೆ ಒತ್ತುವರಿ ಸಂಬಂಧ ಸಭೆ ನಡೆಸಲಾಗುತ್ತಿದ್ದು ಮಾರ್ಚ್ 30ರೊಳಗೆ ಬಾಕಿ ಇರುವ ಎಲ್ಲ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೖಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ ನೀಡಿದರು. ತೆರವುಗೊಳಿಸಿದ ಕೆರೆಗಳ ಸುತ್ತ ಟ್ರಂಚ್ಗಳನ್ನು (ಕಂದಕ) ನಿರ್ಮಿಸಿ ನಾಮಫಲಕಗಳನ್ನು ಅಳವಡಿಸುವ ಮೂಲಕ ಮರು-ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.