ಮಂಡ್ಯ: ‘ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಸಲು ವಿಶೇಷ ತರಗತಿ ಹಾಗೂ ಕಿರು ಪರೀಕ್ಷೆಗಳನ್ನು ಆಯೋಜಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು. ಜೊತೆಗೆ ವಸತಿ ಶಾಲೆಗಳಲ್ಲಿರುವ ಸಮಸ್ಯೆಗಳ ಕುರಿತು ವಿವರದ ಪಟ್ಟಿ ಕೊಡಿ’ ಎಂದು ಜಿಲ್ಲಾಧಿಕಾರಿ ಕುಮಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯವಸತಿ ಶಾಲೆಗಳಲ್ಲಿನ ಕುಂದು–ಕೊರತೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುತ್ತಿರುವ ಕಟ್ಟಡಗಳ ಪ್ರಗತಿಯ ಬಗ್ಗೆ ಹಾಗೂ ವಸತಿ ಶಾಲೆಗಳಲ್ಲಿನ ಮೂಲ ಸೌಲಭ್ಯ ಕೊರತೆ ಚರ್ಚೆ ನಡೆಸಿದರು.

‘ಜಿಲ್ಲೆಯಲ್ಲಿರುವ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡಲು ಅಧಿಕಾರಿಗಳು ಗಮನ ಹರಿಸಬೇಕು. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆ ಹಾಗೂ ಕಾಲೇಜುಗಳು ಸೇರಿದಂತೆ ಒಟ್ಟು 43 ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಎಲ್ಲಾ ವಸತಿ ಶಾಲೆಗಳಲ್ಲೂ ಕುಡಿಯುವ ನೀರು, ಆಹಾರ, ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿ ಇರಬೇಕು’ ಎಂದು ತಿಳಿಸಿದರು.

ವಸತಿ ಶಾಲೆ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿ
ಕುಮಾರ , ಜಿಲ್ಲಾಧಿಕಾರಿ

‘ಈಗಾಗಲೇ ನೀಡಲಾಗಿರುವ ಸರ್ಕಾರಿ ಯೋಜನೆಗಳು ಸರಿಯಾದ ಪ್ರಮಾಣದಲ್ಲಿ ತಲುಪಿದೆಯೇ ಎಂಬುದರ ಬಗ್ಗೆ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು. ಇದರ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡಲಾಗುವ ಸೌಲಭ್ಯ ತಲುಪಿಸಲು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ಪ್ರಾಂಶುಪಾಲರಾದ ಸುರೇಶ್, ಕೆ.ಎಂ.ಪ್ರಸನ್ನಕುಮಾರ್, ಜಿಲ್ಲಾ ಸಮನ್ವಯ ಅಧಿಕಾರಿ ಬಿ.ಎಂ.ಅಭಿಲಾಷ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.