ಮಂಡ್ಯ: ಕೈಗಾರಿಕೆ, ವಾಣಿಜ್ಯ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಶೇ 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿರಬೇಕು. ಇಲ್ಲವಾದರೆ ಅಂಗಡಿ ಅಥವಾ ಕೈಗಾರಿಕೆಗಳಿಗೆ ದಂಡ ವಿಧಿಸಿ ಪರವಾನಿಗೆ ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಭಾಷಾ ಕಲಿಕಾ ಅಧಿನಿಯಮದ ಪ್ರಕಾರ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಮೊದಲ ಭಾಷೆ ಇರಬೇಕು. ಉರ್ದು ಶಾಲೆಗಳಲ್ಲೂ ಕನ್ನಡ ಭಾಷೆ ವಿಷಯ ಇರಬೇಕು. ಈಗಾಗಲೇ ಜಿಲ್ಲೆಯಲ್ಲಿ ಕನ್ನಡದ ಕಂಪನ್ನು ಹರಡಿಸಲು ಸಾಕಷ್ಟು ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

ಪೋಷಕರಲ್ಲಿ ಕನ್ನಡಪರ ಮನಸ್ಥಿತಿ ಇದ್ದಾಗ ಮಾತ್ರ ಕನ್ನಡ ಕಲಿಯುವವರ ಸಂಖ್ಯೆ ಹೆಚ್ಚಾಗುವ ಮೂಲಕ ಮಕ್ಕಳು ಪ್ರಾರಂಭಿಕ ಹಂತದಲ್ಲಿಯೇ ಕನ್ನಡ ಕಲಿಯಲು ಸಹಕಾರವಾಗುತ್ತದೆ. ನಗರಸಭೆ, ಪುರಸಭೆ ಅಧಿಕಾರಿಗಳು ಇಲ್ಲಿಯವರೆಗೂ ಜಿಲ್ಲೆಯಲ್ಲಿ ಶೇ 60ರಷ್ಟು ಕನ್ನಡ ನಾಮಫಲಕಗಳ ಅಳವಡಿಕೆಯ ನಿಯಮವನ್ನು ಉಲ್ಲಂಘಿಸಿದವರು ಸಂಖ್ಯೆ ಹಾಗೂ ಇಲ್ಲಿಯವರೆಗೂ ವಿಧಿಸಲಾದ ದಂಡದ ಕುರಿತು ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಪಟ್ಟಿಯನ್ನು ಪಡೆದು ಅಂತಹ ಅನಕ್ಷರಸ್ಥರಿಗೆ ಗ್ರಾಮ ಮಟ್ಟದಲ್ಲಿ ಕನ್ನಡ ಕಲಿಸುವ ಹಾಗೂ ಸಹಿ ಹಾಕಿಸುವ ಅಭಿಯಾನ ಮಾಡಿ ಎಂದು ತಿಳಿಸಿದರು.

ಕನ್ನಡ ಮಾತನಾಡುವ ಜಿಲ್ಲೆಯಾದ ಮಂಡ್ಯದಲ್ಲಿಯೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 3500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವುದು ಇದು ವಿಪರ್ಯಾಸ. ಇದರ ಬಗ್ಗೆ ನಾವೇ ಅವಲೋಕಿಸಿಕೊಳ್ಳಬೇಕಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

ಜಿಲ್ಲೆಯ ಬ್ಯಾಂಕುಗಳ ಅಧಿಕಾರಿಗಳಿಗೆ ಕನ್ನಡ ಬಾರದೆ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದರ ಕುರಿತು ಈಗಾಗಲೇ ಸಭೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಬ್ಯಾಂಕಿನ ಸಂಬಂಧಿತ ಎಲ್ಲಾ ಚಟುವಟಿಕೆಗಳು, ಕಡತಗಳು ಮತ್ತು ಸಿಬ್ಬಂದಿ ಗುರುತಿನ ಚೀಟಿಯೂ ಕನ್ನಡದಲ್ಲಿರಬೇಕೆಂದು ಸೂಚನೆ ನೀಡಲಾಗಿದೆ. ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಕನ್ನಡವನ್ನು ಕಲಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.

ಈಗಾಗಲೇ ಆನ್ಲೈನ್ ಮೂಲಕ ಕನ್ನಡ ಕಲಿಸುವ ಕಾರ್ಯ ನಡೆಯುತ್ತಿದೆ. ಆರೋಗ್ಯ ಇಲಾಖೆಯಿಂದ ನೀಡುತ್ತಿರುವ ಜನನ ಪ್ರಮಾಣ ಪತ್ರವು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮುದ್ರಿಸಲಾಗುತ್ತಿದೆ ಎಂಬ ಮಾಹಿತಿ ಇದೆ, ಕಡ್ಡಾಯವಾಗಿ ಕನ್ನಡದಲ್ಲಿ ನೀಡಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯ ಕಡತಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ತಿಮ್ಮೇಶ್ ಮಾತನಾಡಿ, ಕನ್ನಡವನ್ನು ಉಳಿಸುವ ಕಾರ್ಯವನ್ನು ಎಲ್ಲರೂ ಒಗ್ಗಟ್ಟಾಗಿ ನಿರ್ವಹಿಸಬೇಕಾಗಿದ್ದು, ಆಡಳಿತದಲ್ಲಿ ಕನ್ನಡವನ್ನು ಬಳಸುವ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸುವ ಕೆಲಸಗಳು ಜಿಲ್ಲಾಮಟ್ಟದಲ್ಲಿ ಆಗಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್, ಕನ್ನಡ ಜಾಗೃತಿ ರಕ್ಷಣಾ ವೇದಿಕೆಯ ಅಧಿಕಾರೇತರ ಸದಸ್ಯರಾದ ಉಷಾರಾಣಿ, ಕಿಲಾರ ಕೃಷ್ಣೆಗೌಡ, ಚಾಮರಾಜು, ಪಣ್ಣೆದೊಡ್ಡಿ ಹರ್ಷ, ಮಂಜು, ಪ್ರತಿಭಾಂಜಲಿ ಡೇವಿಡ್ ಭಾಗವಹಿಸಿದ್ದರು.

Highlights - ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯವಾಗಿರಲಿ ಬ್ಯಾಂಕ್ಗಳಲ್ಲಿ ಕ್ಕನ್ನಡದಲ್ಲೇ ವ್ಯವಹಾರ ನಡೆಯಬೇಕು ಕನ್ನಡ ನಾಮಫಲಕ ಅಳವಡಿಸಿದಿದ್ದರೆ ಕ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.