ಮಂಡ್ಯ: ‘ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜೂನ್ 7ರಂದು ಕರ್ನಾಟಕ ಸಂಘದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದರು.

ನಗರದ ಕರ್ನಾಟಕ ಸಂಘದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಪ್ರಗತಿಯ ವಿಚಾರವಾಗಿ ಚರ್ಚಿಸುವ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಸುಮಾರು 100ಕೂ ಹೆಚ್ಚು ಮಂದಿ ಸಭೆ ಸೇರಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸಮಸ್ಯೆಗಳ ಪಟ್ಟಿಯನ್ನು ಮಾಡೋಣ. ನಂತರ ಸಮಿತಿಯನ್ನು ರಚಿಸಿ, ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಗಮನಕ್ಕೆ ತರೋಣ. ಎಲ್ಲರೂ ಒಟ್ಟಿಗೆ ಪ್ರಶ್ನೆ ಮಾಡಿ ಗದ್ದಲ ಎಬ್ಬಿಸಿದರೆ ಸಚಿವರು ಸಭೆಯಿಂದ ಹೊರನಡೆಯುತ್ತಾರೆ. ಹೀಗಾಗಿ ಸಮಸ್ಯೆಗಳ ಪಟ್ಟಿಯನ್ನು ಮುಂದಿಟ್ಟು, ಆದ್ಯತೆಯ ಮೇಲೆ ಪರಿಹರಿಸಲು ಮನವಿ ಮಾಡೋಣ’ ಎಂದು ಹೇಳಿದರು.

‘ರೈತ, ದಲಿತ ಮತ್ತು ಕನ್ನಡಪರ ಸಂಘಟನೆಗಳು ನಿರ್ದಿಷ್ಟ ಉದ್ದೇಶ ಇಟ್ಟುಕೊಂಡು ಹೋರಾಟ ಮಾಡುತ್ತಾರೆ. ಆದರೆ, ಮಂಡ್ಯದ ಸಾಂಸ್ಕೃತಿಕ ವಲಯ ಅಭಿವೃದ್ಧಿಗೆ ಧ್ವನಿ ಎತ್ತುವವರು ಯಾರು? ಸಚಿವರು, ಶಾಸಕರಿಗೆ ಈ ಬಗ್ಗೆ ಯೋಚಿಸಲು ಸಮಯವಿಲ್ಲ. ಜಿಲ್ಲಾಡಳಿತ ತನ್ನದೇ ಕೆಲಸ ಕಾರ್ಯಗಳಲ್ಲಿ ಮುಳುಗಿದೆ. ಹೀಗಾಗಿ ಸಾಂಸ್ಕೃತಿಕ ಸಮಿತಿಯ ಅಗತ್ಯವಿದೆ’ ಎಂದರು.

‘ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ ಮತ್ತು ವೃತ್ತಗಳ ಅಭಿವೃದ್ಧಿಯಲ್ಲ. ಕಲೆ, ಸಾಹಿತ್ಯ, ಸಂಗೀತ, ರಂಗಭೂಮಿ ಬೆಳವಣಿಗೆಗೆ ಅಗತ್ಯವಾದ ರಂಗಮಂದಿರ, ಸಭಾಂಗಣಗಳನ್ನು ನಿರ್ಮಿಸಲು ಒತ್ತು ಕೊಡಬೇಕಿದೆ. ನಿರ್ಮಾಣವಾದ ಭವನಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕಿದೆ. ಭೌತಿಕ ಪ್ರಗತಿಯ ಜೊತೆಗೆ ಬೌದ್ಧಿಕ, ಸಾಂಸ್ಕೃತಿಕ ಹಾಗೂ ನೈತಿಕ ಪ್ರಗತಿಯೂ ಆಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.

‘ರಾಜಕಾರಣಿಗಳಲ್ಲಿ ಒಗ್ಗಟ್ಟು ಇಲ್ಲ ಅಂದುಕೊಳ್ಳುತ್ತೇವೆ. ಆದರೆ ಸಾಹಿತಿಗಳು, ಹೋರಾಟಗಾರರು ಮತ್ತು ಸಂಘಟನೆಗಳಲ್ಲೂ ಒಗ್ಗಟ್ಟಿನ ಕೊರತೆ ಇದೆ. ಜಿಲ್ಲೆಯ ಅಭಿವೃದ್ಧಿಗಾಗಿ ಸಾಂಸ್ಕೃತಿಕ ವಲಯ ಒಗ್ಗಟ್ಟು ಪ್ರದರ್ಶಿಸಬೇಕು’ ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಿ.ಪಿ. ಸ್ವಾಮಿ,ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಮಾ.ಸೋ. ಚಿದಂಬರ್, ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಟಿ. ಹನುಮಂತು, ನಿವೃತ್ತ ಉಪನ್ಯಾಸಕ ಚಲುವೇಗೌಡ, ಕಸಾಪ ಮಾಜಿ ಕೋಶಾಧ್ಯಕ್ಷ ಹುಸ್ಕೂರು ಕೃಷ್ಣೇಗೌಡ, ದ.ಕೋ.ಹಳ್ಳಿ ಚಂದ್ರಶೇಖರ್, ಕೊತ್ತತ್ತಿ ರಾಜು, ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು, ಎಚ್.ಡಿ. ಸೋಮಶೇಖರ್, ಥಾಮಸ್ ಬೆಂಜಮಿನ್, ನಾರಾಯಣಸ್ವಾಮಿ, ಕ್ರಾಂತಿಸಿಂಹ, ಕೃಷ್ಣ ಸ್ವರ್ಣಸಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-1216738145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.