ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾದರಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಕೂಡ ಮುಂದುವರಿಸಿಕೊಂಡು ಹೋಗುತ್ತಾರೆ ಎಂಬುವ ವಿಶ್ವಾಸವಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ನಗರದಲ್ಲಿ ಸುದ್ಧಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ನನ್ನ ಕಷ್ಟ ಕಾಲದಲ್ಲೂ ಡಿ.ಕೆ.ಶಿವಕುಮಾರ್ ಅವರು ನನ್ನೊಂದಿಗೆ ಇದ್ದರು. ಮುಂದೆಯೂ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಷ್ಟು ದಿನ ಸಿದ್ದರಾಮಯ್ಯ ಆಡಳಿತ ಸರಿಯಿಲ್ಲ ಎಂದು ವಿಪಕ್ಷಗಳು ಹೇಳುತ್ತಿದ್ದವು, ಈಗ ಸಿದ್ದರಾಮಯ್ಯ ಅವರಿಗೆ ಅನ್ಯಾಯ ಆಗೋಯ್ತು ಎನ್ನುತ್ತಿದ್ದಾರೆ. ಅವರಂತೆ ನಮ್ಮಲ್ಲೂ ಜಗಳ ಆಗಬಹುದು ಎಂದು ನಿರೀಕ್ಷಿಸಿದ್ದರು, ಆದರೆ ಅದು ಹುಸಿಯಾಯಿತು. ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ. ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಬೇಡಿಕೆ ಎಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-141763088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.