ಬೆಳಕವಾಡಿ: ಸಮೀಪದ ಪೂರಿಗಾಲಿ ಗ್ರಾಮದಲ್ಲಿ ಶನಿವಾರ ರಾತ್ರಿ ರೋಜಾ (30) ಎಂಬುವರಿಗೆ ವರದಕ್ಷಿಣೆಗಾಗಿ ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ನೀಡಿ ಕುತ್ತಿಗೆಗೆ ಹಗ್ಗದಿಂದ ಬಿಗಿದು ಗಂಡ ಮತ್ತು ಅತ್ತೆ ಕೊಲೆ ಮಾಡಿದ್ದಾರೆ ಎಂದು ಮೃತಳ ತಾಯಿಯ ದೂರಿನ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಸೋಸಲೆ ಹೋಬಳಿಯ ಎಸ್.ದೊಡ್ಡಪುರ ಗ್ರಾಮದ ಸರೋಜಮ್ಮ ಅವರು ತಮ್ಮ 2ನೇ ಮಗಳು ರೋಜಾಳನ್ನು ಪೂರಿಗಾಲಿ ಗ್ರಾಮದ ರಾಜೇಂದ್ರನಿಗೆ ಎರಡೂವರೆ ವರ್ಷಗಳ ಹಿಂದೆ ಮದುವೆ ಮಾಡಿ ಕೊಟ್ಟಿದ್ದು ಅವರಿಗೆ 1 ವರ್ಷದ 3 ತಿಂಗಳ ಹೆಣ್ಣು ಮಗು ಇದೆ. ತವರಿನ ಆಸ್ತಿ ಮಾರಾಟ ಮಾಡಿ ಹಣ ತೆಗೆದುಕೊಂಡು ಬಾ ಎಂದು ವರದಕ್ಷಿಣೆ ಕಿರುಕುಳ ನೀಡಿ ನನ್ನ ಮಗಳನ್ನು ಗಂಡ ರಾಜೇಂದ್ರ ಮತ್ತು ಅತ್ತೆ ತಾರಮ್ಮ ಸೇರಿ ಕೊಲೆ ಮಾಡಿದ್ದಾರೆ ಎಂದು ಮೃತಳ ತಾಯಿ ಸರೋಜಮ್ಮ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-40-341473043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.