ಮಂಡ್ಯ: ಸ್ನೇಹ ಬಳಗ ಅಲಯನ್ಸ್ ಕ್ಲಬ್, ಪರಿಸರ ಅಲಯನ್ಸ್ ಕ್ಲಬ್, ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ (ದುದ್ದ) ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 4ರಂದು ಬೆಳಿಗ್ಗೆ 11 ಗಂಟೆಗೆ ಸಸ್ಯೋತ್ಸವ, ಗೀತಗಾಯನ ಕಾರ್ಯಕ್ರಮವನ್ನು ತಾಲ್ಲೂಕಿನ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.

ಸೌತ್ ಮೌನ್ಸಿಫಲ್ ಕೌನ್ಸಿಲ್ ಉಪಾಧ್ಯಕ್ಷ ಕೆ.ಟಿ. ಹನುಮಂತು ಉದ್ಘಾಟಿಸುವರು. ಪ್ರಾಂಶುಪಾಲ ಟಿ.ವೀಣಾ ಅಧ್ಯಕ್ಷತೆ ವಹಿಸುವರು. ಸ್ತ್ರೀರೋಗ ತಜ್ಞೆ ಡಾ.ಎಂ. ಶ್ವೇತಾ ಅವರು ಕ್ಯಾನ್ಸರ್ ಜಾಗೃತಿ ಕುರಿತು ಉಪನ್ಯಾಸ ನೀಡುವರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಎಸ್. ಪ್ರಶೀಲ್ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗನರಸಿಂಹೇಗೌಡ, ಲಯನ್ಸ್ ಸಂಸ್ಥೆಯ ಕೆ.ಎನ್. ಚಂದ್ರಶೇಖರ್, ಉಪ ಪ್ರಾಂಶುಪಾಲರಾದ ಎಂ. ರೇಣುಕಮ್ಮ ಭಾಗವಹಿಸುವರು. ಗಾಯಕರಾದ ಶೇಖರ್, ವೈರಮುಡಿ ತಂಡ ಗೀತ ಗಾಯನ ನಡೆಸಿಕೊಡಲಿದೆ.

ಮಂಡ್ಯ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ನಗರದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಗೆ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿಯೊಂದು ವಿಭಾಗಕ್ಕೂ ಪ್ರತ್ಯೇಕ ಬಹುಮಾನ ನೀಡಲಾಗುವುದು ಎಂದರು. ಆಸಕ್ತರು ಮಾಹಿತಿಗೆ ಮಂಗಲ ಎಂ.ಯೋಗೀಶ್ (.98447 69755) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-1044257466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.