ಬೀದಿನಾಯಿ ಹಾವಳಿ: ಕ್ರಮಕ್ಕೆ ಸೂಚನೆ
ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದು ಕಂಡು ಬಂದಿದ್ದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲು ಕೂಡಲೇ ಕ್ರಮ ಕೈಗೊಳ್ಳಿ ಹಾಗೂ ಜಿಲ್ಲೆಯಲ್ಲಿ ನಾಯಿ ಕಡಿತಕ್ಕೆ ಒಳಪಟ್ಟವರ ವರದಿ ತಯಾರಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಕುಡಿಯುವ ನೀರಿನ ಶುದ್ಧತೆ ಬಹಳ ಮುಖ್ಯವಾಗಿದ್ದು ಮಳೆ ಬಂದಂತಹ ಸಂದರ್ಭದಲ್ಲಿ ಕುಡಿಯುವ ನೀರಿನಲ್ಲಿ ಮಣ್ಣು ಮಿಶ್ರವಾಗಿರುವುದು ಬೆಳಕಿಗೆ ಬಂದಿದೆ. ನೀರಿನ ಶುದ್ಧತೆಯ ಕಡೆಗೆ ಹೆಚ್ಚಿನ ನಿಗಾ ವಹಿಸಿ ಮತ್ತು ಇಂದಿರಾ ಕ್ಯಾಂಟೀನ್‌ನಲ್ಲಿ ಕುಡಿಯುವ ನೀರಿನ ಘಟಕದ ವ್ಯವಸ್ಥೆಯಲ್ಲಿ ಹಾಗೂ ಊಟದ ಸ್ವಚ್ಛತೆ ಬಗ್ಗೆ ಪ್ರತಿ ನಿತ್ಯ ಪರಿಶೀಲಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.