ಮಂಡ್ಯ: ‘ಪುಸ್ತಕ ಸಹವಾಸ ಮಾಡಿದವನು ಸಮಾಜದಲ್ಲಿ ಅತ್ಯಂತ ಸಂತಸವಾಗಿರುತ್ತಾನೆ’ ಎಂದು ಡಯಟ್ ನಿವೃತ್ತ ಉಪನ್ಯಾಸಕ ಜಿ.ಸಿ. ಜಯಶಂಕರ್ ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ತಾಲ್ಲೂಕಿನ ಗೊರವಾಲೆ ಗ್ರಾಮದ ಉಪನ್ಯಾಸಕ ಮಧುಸೂದನ್ ನರಸಿಂಹೇಗೌಡ ಅವರ ಮನೆಯಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ 'ಮನೆಗೊಂದು ಗ್ರಂಥಾಲಯ ಅನುಷ್ಠಾನ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನೆಗೊಂದು ಮರ ಊರಿಗೊಂದು ವನ ರೀತಿಯಲ್ಲಿ ಗ್ರಂಥಾಲಯ ಇರಬೇಕು. ಮರಗಳಿಂದ ಪರಿಸರ ಉಳಿದರೆ, ಗ್ರಂಥಾಲಯಗಳಿಂದ ಜನರು ಬುದ್ಧಿವಂತರಾಗುತ್ತಾರೆ, ಪ್ರತಿಯೊಬ್ಬರಿಗೂ ಪುಸ್ತಕವೆಂಬುದು ಆಪದ್ಬಾಂಧವನಂತೆ ಕೆಲಸ ಮಾಡುವ ಮೂಲಕ ಜ್ಞಾನಾರ್ಜನೆ ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಕೆಂಪಮ್ಮ, ಕಾರಸವಾಡಿ ಮಹದೇವ, ಕರ್ನಾಟಕ ಜಾನಪದ ವಿವಿ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಚಂದ್ರಶೇಖರ ದ.ಕೋ.ಹಳ್ಳಿ, ಎಂ.ಮಂಚಶೆಟ್ಟಿ, ಉಮೇಶ ದಡಮಹಳ್ಳಿ, ಸದ್ದಾಂ ತಗ್ಗಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-40-1421688521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.