ಮಂಡ್ಯ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶದ ಭದ್ರತೆ ಮತ್ತು ಸಮಾನತೆ ಕಾಪಾಡುವ ನಿಟ್ಟಿನಲ್ಲಿ ದೇಶಕ್ಕೆ ಬೃಹತ್ ಲಿಖಿತ ಸಂವಿಧಾನವನ್ನು ನೀಡಿದ್ದಾರೆ. ವಿಶ್ವವೇ ಭಾರತ ಸಂವಿಧಾನವನ್ನು ಒಪ್ಪಿಕೊಂಡಿರುವುದು ದೇಶಕ್ಕೆ ಹೆಮ್ಮೆಯ ವಿಷಯ. ಶಿಕ್ಷಣದಿಂದ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ’ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಎಸ್ಸಿಪಿ, ಟಿಎಸ್ಪಿ ಹಣ ಮೂರು ರಾಜ್ಯಗಳಲ್ಲಿ ಮಾತ್ರ ಬಳಕೆಯಲ್ಲಿದ್ದು ನಮ್ಮ ಸರ್ಕಾರ ಎಲ್ಲರಿಗೂ ಸಮನ್ವಯ ನ್ಯಾಯ ನೀಡಿದೆ. ಎಲ್ಲ ಸಮುದಾಯಗಳು ಸ್ವಾವಲಂಬನೆಯಿಂದ ಜೀವನ ನಡೆಸುವ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳನ್ನು ನೀಡಿದ್ದೇವೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಪಿ.ರವಿಕುಮಾರ್ ಮಾತನಾಡಿ, ‘ಜಿಲ್ಲೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ನಡೆಸಲಾಗುವುದು. ಅಂಬೇಡ್ಕರ್ ತತ್ವ, ಸಿದ್ಧಾಂತಗಳು ಎಲ್ಲರ ಮನೆಯಲ್ಲಿ ಬೆಳಗಬೇಕು ಎಂದರು.

ನಿವೃತ್ತ ಪ್ರಾಧ್ಯಾಪಕ ಡಿ. ಆನಂದ್ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ಹಣಾಧಿಕಾರಿ ಕೆ.ಆರ್. ನಂದಿನಿ ಅವರು ಸಂವಿಧಾನದ ಪ್ರಸ್ತಾವನೆ ಬೋಧಿಸಿದರು. ನಂತರ ಸಮುದಾಯದ ಸಾಧಕರಿಗೆ ಗಣ್ಯರು ಸನ್ಮಾನಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ಅಂಬೇಡ್ಕರ್ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಯಿತು.

ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ್, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಕೆ, ತಹಶೀಲ್ದಾರ್ ವಿಶ್ವನಾಥ್ ಮತ್ತು ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-324153441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.