ಮಂಡ್ಯ: ಜಮೀನು ವಿವಾದ ಬಗೆಹರಿಸಿಕೊಡದ ಹಿನ್ನೆಲೆಯಲ್ಲಿ ಬೇಸತ್ತು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿ ಮಂಗಳವಾರ ಬೆಳಿಗ್ಗೆ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ರೈತ.

ಸ್ಥಳೀಯರು ಕೂಡಲೇ ನೀರು ಎರಚಿ ಆತನನ್ನು ರಕ್ಷಿಸಿ, ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಶೇ 60ರಷ್ಟು ದೇಹ ಸುಟ್ಟು ಹೋಗಿರುವುದರಿಂದ ಸಾವು– ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಗ್ರಾಮದಲ್ಲಿ ಈತನ ಕುಟುಂಬಕ್ಕೆ ಸೇರಿದ ಎರಡು ಎಕರೆ ಜಮೀನಿದ್ದು, ಕೆಲ ವರ್ಷಗಳ ಹಿಂದೆಯೇ ಅದನ್ನು ಸರ್ಕಾರ ವಶಪಡಿಸಿಕೊಂಡು 49 ನಿವೇಶನ ಮಾಡಿ ಬಡವರಿಗೆ ಹಂಚಿಕೆ ಮಾಡಿದೆ. ಆದರೆ, ಇದಕ್ಕೆ ಪ್ರತಿಯಾಗಿ ತಮಗೆ ಯಾವುದೇ ಪರಿಹಾರ ಬಂದಿಲ್ಲ. ಜತೆಗೆ ಪರ್ಯಾಯ ಜಮೀನು ನೀಡಿಲ್ಲ. ಈ ಬಗ್ಗೆ ಎಷ್ಟು ಬಾರಿ ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಕಚೇರಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಅದರಂತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲು ಬಂದಿದ್ದರು. ರಾತ್ರಿ ಉದ್ಯಾನದಲ್ಲೇ ಮಲಗಿದ್ದ ಈತ, ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿಸಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಮೊದಲು ವಿದ್ಯುತ್ ಶಾಕ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ ಮಂಜೇಗೌಡ ನಂತರ ತಾನೇ, ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದೇನೆಂದು ಹೇಳಿದ್ದಾರೆ.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಲು ನೆರವಾದರು.

ತನಿಖೆಗೆ ಸೂಚಿಸಿದ್ದೇನೆ: ಜಿಲ್ಲಾಧಿಕಾರಿ ಕುಮಾರ

ಕೆ.ಆರ್.ಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಕೋರಿ ಮಂಜೇಗೌಡ ಸಲ್ಲಿಸಿರುವ ಯಾವುದೇ ಅರ್ಜಿ ಬಾಕಿ ಉಳಿದಿಲ್ಲ. ಅಪ್ಪ–ಮಗನ ಜಗಳ ಮತ್ತು ಬ್ಯಾಂಕ್ನಲ್ಲಿ ಸಾಲ ಮಾಡಿದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದ್ದಾರೆ.

ತನಿಖೆ ಮಾಡಲು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸೂಚಿಸಿದ್ದು, ಅವರು ಈಗಾಗಲೇ ಆತನನ್ನು ಮಾತನಾಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಅಗತ್ಯಬಿದ್ದರೆ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ದಾಖಲಿಸಲು ವೈದ್ಯಾಧಿಕಾರಿಗೆ ತಿಳಿಸಿದ್ದೇನೆ. ಕುಟುಂಬ ಸದಸ್ಯರಿಗೂ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ತನಿಖೆ ಪೂರ್ಣಗೊಂಡ ನಂತರ ನಿಜವಾದ ಕಾರಣ ಏನು ಎಂಬುದು ಗೊತ್ತಾಗಲಿದೆ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.